SSLC ಹಿಂದಿ ಪರೀಕ್ಷೆ ಮುಂದೂಡಿಕೆ.

SSLC ಹಿಂದಿ ಪರೀಕ್ಷೆ ಮುಂದೂಡಿಕೆ.

ಮಹಾವೀರ ಜಯಂತಿ ಹಿನ್ನೆಲೆ, ಮಾ.30 ಬದಲು ಮಾ.31ಕ್ಕೆ ಶಿಫ್ಟ್.

ಬೆಂಗಳೂರು: ಕರ್ನಾಟಕದಾದ್ಯಂತ ಮಾರ್ಚ್​ 18ರಿಂದ ಎಸ್​​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿವೆ. ಈಗಾಗಲೇ ಕೆಲ ಪರೀಕ್ಷೆಗಳು ಕೂಡ ನಡೆದಿವೆ. ಆದರೆ ಮಾ.30ರಂದು ನಡೆಯಬೇಕಿದ್ದ ಹಿಂದಿ ಪರೀಕ್ಷೆಯನ್ನು ಇದೀಗ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಮಾ. 31ರಂದು ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಸುತ್ತೋಲೆಯಲ್ಲಿ ಏನಿದೆ?

2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್​ 02ರವರೆಗೆ ನಡೆಯಲಿವೆ ಎಂದು 2025 ನವೆಂಬರ್​​ 4 ​ ರಂದು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಅದರಂತೆ ಈಗಾಗಲೇ ಪರೀಕ್ಷೆ ಕೂಡ ಪ್ರಾರಂಭವಾಗಿವೆ. ಅದರಂತೆಯೇ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್​ 30ರಂದು ನಿಗದಿಪಡಿಸಲಾಗಿತ್ತು.

ಆದರೆ ಸರ್ಕಾರದ ಅಧಿಸೂಚನೆಯಂತೆ ಮಾರ್ಚ್​ 26ರನ್ವಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾರ್ಚ್​ 31ರಂದು ಅಂದರೆ ಮಂಗಳವಾರ ಬದಲಾಗಿ ಮಾರ್ಚ್​ 30ರ ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿತ್ತು. ಈ ಸಂಬಂಧ ಮಾರ್ಚ್​ 30ರಂದು ನಿಗದಿಪಡಿಸಲಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾರ್ಚ್​ 31ರಂದು ಮಂಗಳವಾರ ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯದ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯುವುದಾಗಿದೆ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *