ಕಾಲ್ತುಳಿತ ಪ್ರಕರಣ || RCB, KSCA ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

Chinnaswamy stampede case: 'CM Siddaramaiah ನವರೇ ಇವತ್ತೇ ಕಾರ್ಯಕ್ರಮ ಮಾಡಿ ಅಂತಾ ವಿರಾಟ್ ಕೊಹ್ಲಿ ಹೇಳಿದ್ರಾ?'

ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದುಃಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ಬುಧವಾರ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಮತ್ತೆ ವಿಶೇಷ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ, ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರು ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್ಸಿಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿಸಿದರು.

ನಗರ ಪೊಲೀಸ್ ಆಯುಕ್ತರು ಸೇರಿ ಹಲವು ಹಿರಿಯ ಅಧಿಕಾರಿಗಳ ಅಮಾನತು: ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದೆ ಎಂದು ಹೇಳಿದರು.

 ನಾನು ಶಾಸಕ, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂಬ ಬೆಂಬಲ ನೀಡಿದರು.

Leave a Reply

Your email address will not be published. Required fields are marked *