ಬೆಂಗಳೂರು: ಆರ್ಸಿಬಿ ತಂಡ ಟ್ರೋಫಿ ಗೆದ್ದ ಹಿನ್ನೆಲೆ ಬೆಂಗಳೂರಿನಲ್ಲಿ ವಿಜಯೋತ್ಸವಕ್ಕೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು. ಘಟನೆ ಸಂಬಂಧ ಇಂದು (ಜೂನ್ 6) ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂನ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ ಎಂದು ಟಿವಿ 9 ಕನ್ನಡ ವರದಿ ಮಾಡಿದೆ.

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಬಂಧ, ಈಗಾಗಲೇ ಆರ್ಸಿಬಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ವಿರುದ್ಧ ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ.ವೆಂಕಟೇಶ್ ಎಂಬುವವರು ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ದೂರು ಸ್ವೀಕರಿಸುವುದಾಗಿ ಪೊಲೀಸರು ಹಿಂಬರಹ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ವಿರಾಟ್ ಕೊಹ್ಲಿ ವಿರುದ್ದವೂ ಸಹ ಎಫ್ಐಆರ್ ದಾಖಲಿಸುವಂತೆ ನೈಜ ಹೋರಾಟಗಾರರ ವೇದಿಕೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲು ಆಗಮಿಸಿದೆ. ಆದರೆ, ಕಬ್ಬನ್ ಪಾರ್ಕ್ ಪೊಲೀಸರು ದೂರು ಪಡೆಯಲು ಹಿಂದೇಟು ಹಾಕಿದ್ದರು. ಕೆಲ ಗಂಟೆಗಳ ಬಳಿಕ ದೂರು ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ ಜೊತೆಗೆ ಕೊಹ್ಲಿ ವಿರುದ್ಧ ದೂರನ್ನು ಪರಿಗಣಿಸುವುದಾಗಿ ಕಬ್ಬನ್ ಪಾರ್ಕ್ ಪೊಲೀಸರು ಹಿಂಬರಹ ನೀಡಿದ್ದಾರೆ ಎಂದು ತಿಳಿದುಬಂದಿದೆ. ವಿರಾಟ್ ಕೊಹ್ಲಿ ವಿರುದ್ದವೂ ಸಹ ಎಫ್ಐಆರ್ ದಾಖಲಿಸುವಂತೆ ನೈಜ ಹೋರಾಟಗಾರರ ವೇದಿಕೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲು ಆಗಮಿಸಿದೆ. ಆದರೆ, ಕಬ್ಬನ್ ಪಾರ್ಕ್ ಪೊಲೀಸರು ದೂರು ಪಡೆಯಲು ಹಿಂದೇಟು ಹಾಕಿದ್ದರು. ಕೆಲ ಗಂಟೆಗಳ ಬಳಿಕ ದೂರು ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ ಜೊತೆಗೆ ಕೊಹ್ಲಿ ವಿರುದ್ಧ ದೂರನ್ನು ಪರಿಗಣಿಸುವುದಾಗಿ ಕಬ್ಬನ್ ಪಾರ್ಕ್ ಪೊಲೀಸರು ಹಿಂಬರಹ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಂತಾಪ ಸೂಚಿಸಿದೆ. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ಅವರು ಸಹ ಆರ್ಸಿಬಿಯ ಸಂತಾಪದ ಸಂದೇಶವನ್ನೇ ಮರುಹಂಚಿಕೊಂಡಿದ್ದಾರೆ. ಕೊಹ್ಲಿ ಅವರ ಈ ನಡೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ.
ಆರ್ಸಿಬಿ ಸಂತಾಪದ ಪೋಸ್ಟ್ ಅನ್ನೇ ವಿರಾಟ್ ಕೊಹ್ಲಿ ಮತ್ತೆ ತಮ್ಮ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆಯೇ ಹೊರತುಯಾವುದೇ ಪ್ರತ್ಯೇಕ ಪೋಸ್ಟ್ ಹಾಕಿಕೊಂಡಿಲ್ಲ. ಕೊಹ್ಲಿ ಅವರ ಈ ನಡೆ ವಿರುದ್ಧ ಹಲವರು ಆಕ್ರೋಶ ಹೊರಹಾಕಿದ್ದು, ಅವರ ವಿರುದ್ಧ ಬಂಧಿಸುವಂತೆಯೂ ಹೇಳುತ್ತಿದ್ದಾರೆ. ಇನ್ನೂ ಕೆಲವರು ಸಮರ್ಥನೆ ಮಾಡಿಕೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಇದಕ್ಕೂ ತಮಗೂ ಸಂಬಂಧವಿಲ್ಲವೆಂಬಂತೆ ಲಂಡನ್ ಪ್ರವಾಸ ಕೈಗೊಂಡಿದ್ದಾರೆ. ಸರ್ಕಾರ ಈ ದುರಂತ ಸಂಬಂಧ ಈಗಾಗಲೇ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರನ್ನು ಬಂಧಿಸಿದೆ. ಆದರೆ, ವಿರಾಟ್ ಕೊಹ್ಲಿ ಬಂಧನ ಏಕಿಲ್ಲ ಎಂದು ಹಲವು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಮತ್ತೊಂದೆಡೆ ಈ ದುರಂತ ಸಂಭವಿಸಲು ಪ್ರಮುಖ ಕಾರಣ ಸರ್ಕಾರದ ನಿರ್ಲಕ್ಷ್ಯವಾಗಿದೆ. ಟ್ರೋಫಿ ಗೆದ್ದು ಮಾರನೇ ದಿನ ವಿಜಯೋತ್ಸವ ಕಾರ್ಯಕಮವನ್ನು ಹಮ್ಮಿಕೊಳ್ಳಬೇಕಿತ್ತೇ? ಒಂದೆರಡು ದಿನ ಅಥವಾ ಒಂದು ವಾರದ ಬಳಿಕ ಕಾರ್ಯಕ್ರವನ್ನು ಹಮ್ಮಿಕೊಳ್ಳಬಹುದಿತ್ತು. ತರಾತುರಿಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜ್ಯ ಸರ್ಕಾರ ಇದನ್ನು ಆಯೋಜನೆ ಮಾಡಿದೆ ಎಂದು ವಿಪಕ್ಷ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ.