ದಾವಣಗೆರೆ: ಸಿಸಿ ಕ್ಯಾಮೆರಾದಲ್ಲಿ ಡೇವಿಡ್ ಕೃತ್ಯ ಸೆರೆ
ದಾವಣಗೆರೆ : ಭರತ್ ಕಾಲೋನಿಯಲ್ಲಿ ಡೇವಿಡ್ ಎಂಬ ವ್ಯಕ್ತಿ ನಿಲ್ಲಿಸಿದ್ದ ಕಾರುಗಳ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಸುತ್ತಿದ್ದು, ಐದಾರು ವಾಹನಗಳಿಗೆ ಹಾನಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಡೇವಿಡ್ ಕಲ್ಲು ತೂರಿ ಓಡಿಹೋಗುವ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ಆರ್ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಈ ಹಿಂದೆಯೂ ಡೇವಿಡ್ ಇಂತಹ ಕೃತ್ಯಗಳನ್ನು ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಲ್ಲಿ ಬೈಕ್ಗಳಿಗೆ ಹಾನಿ ಮಾಡಿದ ಪ್ರಕರಣಗಳೂ ದಾಖಲಾಗಿದ್ದವು ಎಂದು ತಿಳಿದು ಬಂದಿದೆ. ಪೊಲೀಸರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
For More Updates Join our WhatsApp Group :




