ಸುನೇತ್ರಾ ಪವಾರ್ ಹಾದು ನಡೆಸಿದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.

ಸುನೇತ್ರಾ ಪವಾರ್ ಹಾದು ನಡೆಸಿದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನವೀನ ಜವಾಬ್ದಾರಿ ವಹಿಸಿಕೊಂಡರು.

ಪುಣೆ: ಎನ್​ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಚಿವಾಲಯಕ್ಕೆ ಆಗಮಿಸಿ ತಮ್ಮ ಕೆಲಸ ಆರಂಭಿಸಿದ್ದಾರೆ. ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿರುವುದರಿಂದ ಇದು ಮಹಾರಾಷ್ಟ್ರ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಸುನೇತ್ರಾ ಅವರ ಪತಿ ಅಜಿತ್ ಪವಾರ್ ಅವರ ಹಠಾತ್ ನಿಧನದ ನಂತರ ಅವರು ಈ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಅಧಿಕಾರ ವಹಿಸಿಕೊಳ್ಳುವ ಮೊದಲು, ಸುನೇತ್ರಾ ಪವಾರ್ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದಾದರ್‌ನ ಚೈತ್ಯಭೂಮಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಅವರು ತಮ್ಮ ಹಿರಿಯ ಮಗ ಪಾರ್ಥ್ ಪವಾರ್ ಮತ್ತು ಹಿರಿಯ ಎನ್‌ಸಿಪಿ ನಾಯಕರೊಂದಿಗೆ ಸಚಿವಾಲಯಕ್ಕೆ ತೆರಳಿದರು. ಸುನೇತ್ರಾ ಪವಾರ್ ಅವರಿಗೆ ಈ ಹಿಂದೆ ಅಜಿತ್ ಪವಾರ್ ಹೊಂದಿದ್ದ ಅದೇ ಖಾತೆಗಳನ್ನು ನೀಡಲಾಗಿದೆ. ಜನವರಿ 31 ರಂದು ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಅವರಿಗೆ ಪ್ರಮಾಣವಚನ ಬೋಧಿಸಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *