28 ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ; 7 ಟನ್ ತ್ಯಾಜ್ಯ ತೆರವು, 221 ಸಿಬ್ಬಂದಿ ಭಾಗಿ
ಬೆಂಗಳೂರು: ಸ್ವಚ್ಛ ಸರ್ವೇಕ್ಷಣ್ 2025-26 ಅಂಗವಾಗಿ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 28 ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡುವ ಸ್ಥಳ ಹಾಗೂ ಗುಟಕಾ/ ಪಾನ್ ಪರಾಗ್ ತಿಂದು ಉಗಿಯುವ ಸ್ಥಳ ಹಾಗೂ ಸುತ್ತಮುತ್ತಲಿನ ಸ್ಥಳಗಳ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ: ದಲ್ಜಿತ್ ಕುಮಾರ್7 ಟನ್ ತ್ಯಾಜ್ಯ ತೆರವು 221 ಜನ ಪೌರಕಾರ್ಮಿಕರು ಇತರೆ ಸ್ವಚ್ಛತೆ ಸಿಬ್ಬಂದಿಗಳು ಭಾಗಿ.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರ ಪಾಲಿಕೆ ರೂಪಿಸುವ ಉದ್ದೇಶದಿಂದ ಹಾಗೂ ಸ್ವಚ್ಛ ಸರ್ವೇಕ್ಷಣ 2025-26 ರ ಶ್ರೇಯಾಂಕದಲ್ಲಿ ಉತ್ತಮ ಸ್ಥಾನ ಗಳಿಸುವ ನಿಟ್ಟಿನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ರೂಪಿಸಲಾದ ಕಾರ್ಯ ಯೋಜನೆಯ (ಆಕ್ಷನ್ ಪ್ಲಾನ್) ಅನ್ವಯ 9 ನೇ ಭಾಗವಾಗಿ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 28 ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡುವ ಸ್ಥಳ ಹಾಗೂ ಗುಟಕಾ/ ಪಾನ್ ಪರಾಗ್ ತಿಂದು ಉಗಿಯುವ ಸ್ಥಳ ಹಾಗೂ ಸುತ್ತಮುತ್ತಲಿನ ಸ್ಥಳ ಆಯ್ಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಹಾಗೂ ಸದರಿ ಸ್ಥಳಗಲ್ಲಿ ರಂಗೋಲಿ ಬಿಡಿಸಿ ಸುಂದರೀಕರಣಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಹಾಗೂ ಗುಟಕಾ ತಿಂದು ಉಗಿಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ದಲ್ಜಿತ್ ಕುಮಾರ್ ತಿಳಿಸಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ಒಟ್ಟು 221 ಜನ ಪೌರಕಾರ್ಮಿಕರು ಹಾಗೂ ಇತರೆ ಸ್ವಚ್ಛತೆ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಈ ಕಾರ್ಯಾಚರಣೆಯಲ್ಲಿ ಸುಮಾರು 7 ಕ್ವಿಂಟಾಲ್ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆ.
ಈ ಸ್ವಚ್ಛತಾ ಅಭಿಯಾನದಲ್ಲಿ ಡಿಜಿಎಂ ಭೀಮೇಶ್ ನಾಯಕ್, ಸಂಬಂಧಿತ ವಿಭಾಗದ ಎ.ಜಿ.ಎಂ ಗಳು ಅಧಿಕಾರಿಗಳು, ಪೌರಕಾರ್ಮಿಕರು ಹಾಗೂ ಇತರೆ ಸಿಬ್ಬಂದಿಗಳು ಭಾಗಿಯಾಗಿದ್ದರು.
For More Updates Join our WhatsApp Group :




