ಸಿಹಿ ಸುದ್ದಿ | ಕಾರ್ಮಿಕರಿಗೆ ಕನಿಷ್ಠ ವೇತನ ದರ ಹೆಚ್ಚಳ : ಎಂದಿನಿಂದ ಜಾರಿ..?

ನವದೆಹಲಿ: ಕೇಂದ್ರ ಸರ್ಕಾರವು ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿದೆ. ವೇರಿಯಬಲ್ ಡಿಯರ್ನೆಸ್ ಅಲೋವೆನ್ಸ್ (VDA) ಪರಿಷ್ಕರಣೆ ಮೂಲಕ ಕನಿಷ್ಠ ವೇತನ ದರ ಹೆಚ್ಚಳ ಘೋಷಿಸಿದೆ. ಇದು ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿದೆ

ಈ ಪರಿಷ್ಕರಣೆಯು ಕಾರ್ಮಿಕರಿಗೆ, ವಿಶೇಷವಾಗಿ ಅಸಂಘಟಿತ ವಲಯದಲ್ಲಿರುವವರಿಗೆ, ಆರ್ಥಿಕ ನಿರ್ವಹಣೆಗೆ ಸಹಕಾರಿಯಾಗಲಿದೆ. ಪರಿಷ್ಕೃತ ವೇತನವು ಕಟ್ಟಡ ಕಾರ್ಮಿಕರು, ಲೋಡಿಂಗ್ ಮತ್ತು ಅನ್‌ಲೋಡಿಂಗ್, ವಾಚ್ ಮತ್ತು ವಾರ್ಡ್, ಕಸ ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೃಷಿ ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ

ಕೌಶಲ್ಯಮಟ್ಟಕ್ಕೆ ಅನುಗುಣವಾಗಿ ಕನಿಷ್ಠ ವೇತನ ದರ ಹೆಚ್ಚಿಸಲಾಗಿದೆ. ಕೌಶಲ್ಯರಹಿತ, ಅರೆ-ಕುಶಲ, ಕೌಶಲ್ಯ ಮತ್ತು ಹೆಚ್ಚು ನುರಿತ ಮತ್ತು ಇತರೇ ವರ್ಗಗಳನ್ನು A, B ಮತ್ತು C ಎಂದು ವರ್ಗೀಕರಿಸಲಾಗಿದೆ

ವೇತನ ಪರಿಷ್ಕರಣೆ ಅಡಿಯಲ್ಲಿ ಎ- ವರ್ಗದಲ್ಲಿರುವವರು ದಿನಕ್ಕೆ 783 ರೂ.ಗಳಂತೆ ತಿಂಗಳಿಗೆ ರೂ 20,358 ರೂ., ಅರೆ-ಕುಶಲ ಕೆಲಸಗಾರರು 868 ರೂ. ನಂತೆ ತಿಂಗಳಿಗೆ ರೂ 22,568 ರೂ., ನುರಿತ ಮತ್ತು ಕ್ಲೆರಿಕಲ್ ಕೆಲಸಗಾರರು ದಿನಕ್ಕೆ 954 ರೂ.ನಂತೆ 24,804 ರೂ., ಹೆಚ್ಚು ನುರಿತ ಕೆಲಸಗಾರರು ಅದಕ್ಕಿಂತಲೂ ಹೆಚ್ಚಿನ ವೇತನವನ್ನು ಪಡೆಯಲಿದ್ದಾರೆ.

Leave a Reply

Your email address will not be published. Required fields are marked *