ತೆಲಂಗಾಣ ಬಸ್ ದುರಂತ: ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ತಂದೆ.
ಹೈದರಾಬಾದ್: ತೆಲಂಗಾಣ ಬಸ್ ಅಪಘಾತದಲ್ಲಿ ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಆಕಾಶವೇ ತಲೆಯ ಮೇಲೆ ಬಿದ್ದಂತಾಗಿದೆ. ಮೂವರು ಹೆಣ್ಣುಮಕ್ಕಳು ಮಸಣ ಸೇರಿದ್ದಾರೆ. ಪೋಷಕರ ಆಕ್ರಂದ ಮುಗಿಲುಮುಟ್ಟಿದೆ. ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ದುರಂತದಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಯಲ್ಲಯ್ಯ ಗೌಡ ಎಂಬುವವರ ಮೂವರು ಹೆಣ್ಣುಮಕ್ಕಳು ಕೂಡ ಸಾವನ್ನಪ್ಪಿದ್ದಾರೆ. ತನುಷಾ, ಸಾಯಿ ಪ್ರಿಯಾ ಮತ್ತು ನಂದಿನಿ ಎಲ್ಲರೂ ಕಾಲೇಜು ವಿದ್ಯಾರ್ಥಿಗಳು. ಇತ್ತೀಚೆಗೆ ಕುಟುಂಬವು ತಮ್ಮ ಹಿರಿಯ ಮಗಳು…
