ಪೊಲೀಸರು ಬಂದ್ರು ಓಡ್ರೋ ಎನ್ನುತ್ತಾ ಹೋಗಿ ನದಿಗೆ ಹಾರಿ ಪ್ರಾಣಬಿಟ್ಟ ಜೂಜುಕೋರ, ಮೂವರು ಪೊಲೀಸರ ಅಮಾನತು.

ಶಹಜಹಾನ್ಪುರ,: ಪೊಲೀಸರು ಜೂಜು ಅಡ್ಡ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಅವರಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿ ಜೂಜುಕೋರನೊಬ್ಬ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಜೂಜು ಅಡ್ಡೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನು ನೋಡಿ ಭಯಪಟ್ಟು ಆರು ಜನರು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖನ್ನೌತ್ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ದ್ವಿವೇದಿ…