ಕೆನಡಾದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹ* ಮತ್ತು ಗುಂಡಿನ ದಾಳಿ.
ಕೆನಡಾ: ಕೆನಡಾದಲ್ಲಿ ಗ್ಯಾಂಗ್ವಾರ್ಗಳು ಹೆಚ್ಚುತ್ತಿವೆ. ವಿಶೇಷವಾಗಿ ಭಾರತದ ಗ್ಯಾಂಗ್ಸ್ಟರ್ಳು ಅಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದ ಉದ್ಯಮಿ ದರ್ಶನ್ ಸಿಂಗ್ ಅವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಬಳಿಕ ಕೆಲವೇ ಹೊತ್ತಲ್ಲಿ ಪಂಜಾಬಿ ಗಾಯಕ ಚನ್ನಿ ನಟ್ಟನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದಾರೆ. ಗ್ಯಾಂಗ್ ಘಟನೆಯ ವಿಡಿಯೋವನ್ನು ಬಿಡುಗಡೆ ಮಾಡಿತ್ತು ಬಳಿಕ ಬಿಷ್ಣೋಯ್ ಗ್ಯಾಂಗ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಘಟನೆಯ ಹೊಣೆಯನ್ನು ಹೊತ್ತುಕೊಂಡಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಗೋಲ್ಡಿ ಧಿಲ್ಲನ್ ಎರಡೂ ಘಟನೆಗಳ ಹೊಣೆಯನ್ನು ಹೊತ್ತುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.…
