ಬಾಲಕಿಯನ್ನು ಹಿಂಬಾಲಿಸಿ ಲೈಬ್ರರಿ ಬಳಿ ಗುಂಡು ಹಾರಿಸಿದ ಯುವಕ – ಫರೀದಾಬಾದ್‌ನಲ್ಲಿ ಘಟನೆ.

ಫರೀದಾಬಾದ್: ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲಿ ಆಕೆಗೆ ಗುಂಡು ಹಾರಿಸಿರುವ ಘಟನೆ ಫರೀದಾಬಾದ್​ನಲ್ಲಿ ನಡೆದಿದೆ. ಆತ ಹಲವು ದಿನಗಳಿಂದ 17 ವರ್ಷದ ಬಾಲಕಿ ಮೇಲೆ ಕಣ್ಣಿರಿಸಿದ್ದ, ಆಕೆಯನ್ನು ಪದೇ ಪದೇ ಹಿಂಬಾಲಿಸುತ್ತಿದ್ದ.  ಬಾಲಕಿ ಹಾಗೂ ಆರೋಪಿ ಯಾವಾಗಲೂ ಹೋಗುತ್ತಿದ್ದ ಲೈಬ್ರರಿ ಹೊರಗೆ ಈ ಘಟನೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗೆ ಬಾಲಕಿಯ ದಿನಚರಿ ತಿಳಿದಿತ್ತು. ಆಕೆ ಬರುತ್ತಾಳೆಂದು ಆತ ಮೊದಲೇ ಬಂದು ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಸ್ವಲ್ಪ ಸಮಯದ ಬಳಿಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಬರುವ ಮೊದಲೇ ಆತ ಬಂದು ಕಾಯುತ್ತಿರುವುದನ್ನು ತೋರಿಸುತ್ತದೆ. ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿಯು ಬಾಲಕಿಯ ಚಲನವಲನಗಳನ್ನು ಗಮನಿಸುತ್ತಿದ್ದ ಆಕೆ ಗ್ರಂಥಾಲಯಕ್ಕೆ ಹೋಗುವ ಮತ್ತು ಬರುವ ಮಾರ್ಗದ ಬಗ್ಗೆ ಮೊದಲೇ ತಿಳಿದಿದ್ದ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ, ಹಲ್ಲೆಕೋರನನ್ನು ಗುರುತಿಸಿದ್ದು, ಆತ ಮೊದಲೇ ತನಗೆ ಕಿರುಕುಳ ಕೊಟ್ಟಿದ್ದ ಹಾಗಾಗಿ ಆತನನ್ನ ಮರೆಯಲು ಸಾಧ್ಯವೇ ಇಲ್ಲ ಎಂದು ಆಕೆ ಹೇಳಿದ್ದಾಳೆ. ಆತ ತನಗೆ ಗೊತ್ತು, ಬಹಳ ಸಮಯದಿಂದ ತನಗೆ ತೊಂದರೆ ನೀಡುತ್ತಿದ್ದ ಎಂದು ಮಾಹಿತಿ ನೀಡಿದ್ದಾಳೆ. ಬಾಲಕಿಯ ಮೇಲೆ ಗುಂಡು ಹಾರಿಸಿದ ನಂತರ, ಆರೋಪಿಯು ಆಯುಧವನ್ನು ಸ್ಥಳದಲ್ಲಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದಾಳಿಯ ಸ್ವಲ್ಪ ಸಮಯದ ನಂತರ ಅಧಿಕಾರಿಗಳು…

ಇಂದೋರ್‌ನಲ್ಲಿ ಬಸ್ ಕಂದಕಕ್ಕೆ ಉರುಳಿದ ದುರಂತ – ಮೂವರು ಸಾ*, 30ಕ್ಕೂ ಹೆಚ್ಚು ಜನರಿಗೆ ಗಾಯ.

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ, 38 ಜನರು ಗಾಯಗೊಂಡಿದ್ದಾರೆ. ಇಂದೋರ್ ಮತ್ತು ಮ್ಹೋವ್ ನಡುವಿನ…

ತಿಪಟೂರು ಅಮಾನಿಕೆರೆಯಲ್ಲಿ ಹಳ್ಳಿ–ನಗರ ಸಂಪರ್ಕಿಸಿದ ಜನ ಮನ ಗೆದ್ದ ಸೊಪ್ಪು ಮೇಳ.

ತಿಪಟೂರು: ಹಿರಿಯ ತಾಯಿಂದಿರು  ಗದ್ದೆ ತೋಟ ಕೆರೆ ಅಂಗಳದಲ್ಲಿ ಬೇಲಿ ಸಾಲಿನಲ್ಲಿ ಸಿಗುವ ಸೊಪ್ಪುಗಳನ್ನು ತಂದು ಅಡುಗೆ ತಯಾರಿಸುವಾಗ ಮನುಷ್ಯ ಆರೋಗ್ಯಕರವಾಗಿದ್ದರು, ಆಧುನಿಕತೆಯ ಸ್ವರ್ಶದಲ್ಲಿ ಬೇಗ ತಯಾರಿಸುವ…

ತೆಲಂಗಾಣ ಬಸ್ ದುರಂತ: ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ತಂದೆ.

ಹೈದರಾಬಾದ್: ತೆಲಂಗಾಣ ಬಸ್ ಅಪಘಾತದಲ್ಲಿ ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಆಕಾಶವೇ ತಲೆಯ ಮೇಲೆ ಬಿದ್ದಂತಾಗಿದೆ. ಮೂವರು ಹೆಣ್ಣುಮಕ್ಕಳು ಮಸಣ ಸೇರಿದ್ದಾರೆ. ಪೋಷಕರ ಆಕ್ರಂದ ಮುಗಿಲುಮುಟ್ಟಿದೆ. ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ದುರಂತದಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಯಲ್ಲಯ್ಯ ಗೌಡ ಎಂಬುವವರ ಮೂವರು ಹೆಣ್ಣುಮಕ್ಕಳು ಕೂಡ ಸಾವನ್ನಪ್ಪಿದ್ದಾರೆ. ತನುಷಾ, ಸಾಯಿ ಪ್ರಿಯಾ ಮತ್ತು ನಂದಿನಿ ಎಲ್ಲರೂ ಕಾಲೇಜು ವಿದ್ಯಾರ್ಥಿಗಳು. ಇತ್ತೀಚೆಗೆ ಕುಟುಂಬವು ತಮ್ಮ ಹಿರಿಯ ಮಗಳು…

ಲಾಲ್ ಬಾಗ್ ನಂತರ ಸ್ಯಾಂಕಿ ಟ್ಯಾಂಕ್ ಕೆರೆಯೂ ಸಿಕ್ಕಾಪಟ್ಟೆ ಹಾನಿಯ ಅಂಚಿನಲ್ಲಿ?

ಬೆಂಗಳೂರು: ಬೆಂಗಳೂರು ಸುರಂಗ ರಸ್ತೆ ಯೋಜನೆ ಲಾಲ್​ ಬಾಗ್​ ಅಡಿಯಲ್ಲಿ ಹಾದುಹೋಗುವ ಸಂಬಂಧ ವಿರೋಧ ವ್ಯಕ್ತವಾಗಿರುವುದರ ಮಧ್ಯೆ ಇದೀಗ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದವರಿಗೂ ಸಮಸ್ಯೆ ಎದುರಾಗಲಿದೆ ಎಂಬ ವಿಚಾರ ಬಹಿರಂಗವಾಗಿದೆ. ಮಲ್ಲೇಶ್ವರಂನ…

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು : ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ  ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು…

“DCM ಸ್ಥಾನ ಕೊಟ್ಟ್ರೆ ನಾನ್ ರೆಡಿ!” — ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ರಾಜಕೀಯ ಕುತೂಹಲಕ್ಕೆ ಕಾರಣ!

ಹಾವೇರಿ: ನನ್ನ ಡಿಸಿಎಂ ಮಾಡುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ. ಹೈಕಮಾಂಡ್ ನನ್ನ ಡಿಸಿಎಂ ಮಾಡಿದ್ರೆ ನಿಭಾಯಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್​ ಖಾನ್​​ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಚಿವರು,…

ಕಬ್ಬಿನ ಬೆಲೆ ವಿವಾದಕ್ಕೆ ಅಂತ್ಯ ಸಿಗಲಿದೆ? ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆ ನೀಡಿದ್ರು!

ಹಾವೇರಿ: ಕಬ್ಬಿನ ಬೆಲೆ ನಿಗದಿಗಾಗಿ ಬೆಳಗಾವಿಯಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಸಂಬಂಧ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದು, ನಿನ್ನೆ ಜಿಲ್ಲಾಧಿಕಾರಿ…

ದರ್ಶನ್ ಕೇಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಮುಖದಲ್ಲಿ ಸಿಕ್ಕಾಪಟ್ಟೆ ಟೆನ್ಷನ್!

ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ  ಎ1 ಆಗಿದ್ದಾರೆ. ಇಂದು ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಈ…

BJP ಮುಖಂಡ ವೆಂಕಟೇಶ್ ಕೊ* ಕೇಸ್‌ಗೆ ಬಿಗ್ ಟ್ವಿಸ್ಟ್: ‘ಸ್ನೇಹ’ದ ಹೆಸರಿನಲ್ಲಿ ದ್ರೋಹ ಮಾಡಿದ ಇಬ್ಬರ ಬಂಧನ!

ಕೊಪ್ಪಳ: ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ  ಹತ್ಯೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್​​ ಸಿಕ್ಕಿದೆ. ಕೊಲೆಗೆ ಸಾಥ್ ನೀಡಿದ್ದ ವೆಂಕಟೇಶ್​​ನ ಇಬ್ಬರು ಸ್ನೇಹಿತರಾದ…