ಮುಂಗಾರು ಮುಗೀತು – ಚಂಡಮಾರುತವೂ ಹೋಯ್ತು! ಚಳಿ ಶುರು, ಕೆಲವೇ ಜಿಲ್ಲೆಗಳಲ್ಲಿ ಮಳೆ.

ಬೆಂಗಳೂರು: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.ಭಾಲ್ಕಿ, ಔರಾದ್ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ. For More Updates Join our WhatsApp Group : https://chat.whatsapp.com/JVoHqE476Wn3pVh1gWNAcH

ಕರ್ನಾಟಕದಲ್ಲಿ ವರುಣನ ಪ್ರಹಾರ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.

ಬೆಂಗಳೂರು: ಕರ್ನಾಟದಲ್ಲಿ ವರುಣಾರ್ಭಟ ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು,…

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ, ಬೆಂಗಳೂರಿಗೂ ಮುನ್ಸೂಚನೆ — ಮುಂದಿನ ವಾರವೂ ಮಳೆ ಸಾಧ್ಯತೆ!

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ…

3 ದಿನ ಧಾರಾಕಾರ ಮಳೆಯ ಎಚ್ಚರಿಕೆ: ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! RainAlert

ಬೆಂಗಳೂರು: ರಾಜ್ಯದ ಜನತೆ ಮತ್ತೊಮ್ಮೆ ಮಳೆವಿಲಕ್ಷಣ ತ್ಯಾರಾಗಲು ಸಿದ್ಧರಾಗಬೇಕು! ಹವಾಮಾನ ಇಲಾಖೆ ಈ ಹಿಂದೆ ನೀಡಿದ್ದ ಮುನ್ಸೂಚನೆಯಂತೆ, ಇಂದು (ಸೆಪ್ಟೆಂಬರ್ 16)ರಿಂದ ಮುಂದಿನ ಮೂರು ದಿನಗಳವರೆಗೆ ಕರ್ನಾಟಕದ…