ತಮಿಳುನಾಡು : ತಮಿಳುನಾಡಿನ ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಮಹಾಶಿವರಾತ್ರಿ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದ್ಗುರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಅವರು ಸದ್ಗುರು ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದರು. ಶಿವಕುಮಾರ್ ಅವರ ಪತ್ನಿ ಉಷಾ, ನಾದಿನಿ ಹಾಗೂ ಕುಣಿಗಲ್ ಶಾಸಕ ಡಾ ರಂಗನಾಥ್ ಅವರ ಪತ್ನಿ ಡಾ. ಸುಮಾ ಮತ್ತಿತರರು ಉಪಸ್ಥಿತರಿದ್ದರು.