ಹೈದರಾಬಾದ್: ಟಿ20 ವಿಶ್ವಕಪ್ 2024ರ ಅಂತಿಮ ಹಣಾಹಣಿಯಲ್ಲಿ ಭಾರತ ಟಿ 20 ವಿಶ್ವಕಪ್ ಗೆದ್ದು ಬೀಗಿದೆ. ಅಂತಿಮವಾಗಿ ಐಸಿಸಿ ಕಪ್ ಗೆದ್ದು ಭಾರತ ತನ್ನ ಪಾರಮ್ಯ ಮೆರೆದಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿ ಆಗಿದ್ದವು. ಬ್ರಿಡ್ಜ್ಟೌನ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಹಣಾಹಣಿಯಲ್ಲಿ ಆರಂಭಿಕ ಹಿನ್ನಡೆಯ ನಡುವೆ ಗೆದ್ದು ಬೀಗಿದೆ. ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು
ಬ್ರಿಡ್ಜ್‌ಟೌನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ 76 ರನ್ ಹಾಗೂ ಅಕ್ಷರ್ ಪಟೇಲ್ 47 ರನ್ ಗಳ ನೆರವಿನಿಂದ 176 ರನ್ ಕಲೆ ಹಾಕಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಷ್ಟೇ ಶಕ್ತವಾಗಿದ್ದು 7 ರನ್ ಗಳಿಂದ ಸೋಲು ಕಂಡಿದೆ.
ದಕ್ಷಿಣ ಆಫ್ರಿಕಾ ಪರ ಹೆಂಡ್ರಿಕ್ಸ್ 4 ರನ್ ಗಳಿಸಿ ಔಟಾದರೆ ಮಾರ್ಕ್ರಾಮ್ ಸಹ 4 ರನ್ ಗಳಿಸಿ ಔಟಾದರು. ನಂತರ ಬಂದ ಸ್ಟಬ್ಸ್ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದು 31 ರನ್ ಬಾರಿಸಿ ಅಕ್ಷರ್ ಪಟೇಲ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು. ಇನ್ನು ಡಿಕಾಕ್ 39 ರನ್ ಗಳಿಸಿದ್ದಾಗ ಅರ್ಷ ದೀಪ್ ಔಟ್ ಮಾಡಿದರು. ಈ ವೇಳೆ ಸ್ಫೋಟಕ ಬ್ಯಾಟಿಂಗ್ ಮಾಡಿದ ಕ್ಲಾಸೆನ್ 52 ರನ್ ಸಿಡಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದಿಟ್ಟರು. ಆದರೆ ಪಂದ್ಯ ಸೋತಿದೆ. ಭಾರತದ ಪರ ಹಾರ್ದಿಕ್ ಪಾಂಡ್ಯ 3, ಅರ್ಷ್ ದೀಪ್ ಸಿಂಗ್ಮತ್ತು ಜಸ್ ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರೆ ಅಕ್ಷರ್ ಪಟೇಲ್ 1 ವಿಕೆಟ್ ಪಡೆದಿದ್ದಾರೆ.