ಟೀಮ್ ಇಂಡಿಯಾ 61 ರನ್ ಅಂತರದಿಂದ ಭರ್ಜರಿ ಗೆಲುವು.

ಟೀಮ್ ಇಂಡಿಯಾ 61 ರನ್ ಅಂತರದಿಂದ ಭರ್ಜರಿ ಗೆಲುವು.

ಭಾರತ–ಪಾಕಿಸ್ತಾನ್ T20 ವಿಶ್ವಕಪ್ ದಾಖಲೆ.

ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ ಗಳಿಸಿದ್ದು ಕೇವಲ 114 ರನ್​​ ಮಾತ್ರ. ಈ ಮೂಲಕ ಟೀಮ್ ಇಂಡಿಯಾ 61 ರನ್​​ಗಳ ಅಮೋಘ ಗೆಲುವು ದಾಖಲಿಸಿದೆ.

ಬಹುನಿರೀಕ್ಷಿತ ಪಂದ್ಯದಲ್ಲಿ ನಿರೀಕ್ಷೆಯಂತೆ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಅದು ಕೂಡ ಬರೋಬ್ಬರಿ 61 ರನ್​ಗಳ ಅಂತರದಿಂದ. ಕೊಲಂಬೊದ ಆರ್​​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಇಶಾನ್ ಕಿಶನ್ (77) ಸ್ಫೋಟಕ ಆರಂಭ ಒದಗಿಸಿದ್ದರು. ಈ ಭರ್ಜರಿ ಆರಂಭದ ನೆರವಿನೊಂದಿಗೆ ಭಾರತ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಈ ಮೂಲಕ ಪಾಕ್ ಪಡೆಗೆ 176 ರನ್​ಗಳ ಕಠಿಣ ಗುರಿ ನೀಡಿದ್ದರು.

ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು ಪವರ್​ಪ್ಲೇನಲ್ಲೇ 4 ವಿಕೆಟ್ ಕಳೆದುಕೊಂಡಿದ್ದರು. ಈ ಆಘಾತದಿಂದ ಹೊರಬರುವ ಮುನ್ನವೇ ಟೀಮ್ ಇಂಡಿಯಾ ಪಾಕ್ ತಂಡವನ್ನು 18 ಓವರ್​ಗಳಲ್ಲಿ 114 ರನ್​ಗಳಿಗೆ ಆಲೌಟ್ ಮಾಡಿದರು. ಈ ಮೂಲಕ ಟೀಮ್ ಇಂಡಿಯಾ 61 ರನ್​​ಗಳ ಭರ್ಜರಿ ಜಯ ಸಾಧಿಸಿತು.

ಈ ಭರ್ಜರಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ 8 ಗೆಲುವುಗಳೊಂದಿಗೆ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಿದೆ.

ಟಿ20 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಈವರೆಗೆ 9 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 8 ಬಾರಿ ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಗೆಲುವುಗಳನ್ನು ದಾಖಲಿಸಿದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

ವಿಶೇಷ ಎಂದರೆ ಭಾರತವನ್ನು ಹೊರತುಪಡಿಸಿ ಯಾವುದೇ ತಂಡ ಪಾಕಿಸ್ತಾನ್ ವಿರುದ್ಧ ಟಿ20 ವಿಶ್ವಕಪ್​ನಲ್ಲಿ 5 ಕ್ಕಿಂತ ಹೆಚ್ಚಿನ ಬಾರಿ ಗೆಲುವು ದಾಖಲಿಸಿಲ್ಲ. ಇತ್ತ ಟೀಮ್ ಇಂಡಿಯಾ ಬರೋಬ್ಬರಿ 8 ಬಾರಿ ಪಾಕ್ ಪಡೆಗೆ ಮಣ್ಣು ಮುಕ್ಕಿಸಿ ಇದೀಗ ವಿಶ್ವ ದಾಖಲೆಯನ್ನೇ ನಿರ್ಮಿಸಿದೆ. ಅಂದರೆ ಭಾರತದ ವಿರುದ್ಧ ಸೋತು ಸೋತು ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ನಲ್ಲಿ ಒಂದೇ ತಂಡದ ವಿರುದ್ಧ ಅತ್ಯಧಿಕ ಸೋಲುಂಡ ತಂಡ ಎನಿಸಿಕೊಂಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *