‘ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಲಾಲ್ಬಾಗ್ ಸುರಂಗ ಮಾರ್ಗ ಹಿಂತೆಗೆದುಕೊಳ್ಳುವುದಿಲ್ಲ’ – DK ಶಿವಕುಮಾರ್

 ‘ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಲಾಲ್ಬಾಗ್ ಸುರಂಗ ಮಾರ್ಗ ಹಿಂತೆಗೆದುಕೊಳ್ಳುವುದಿಲ್ಲ’ – DK ಶಿವಕುಮಾರ್

ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಲಾಲ್​ಬಾಗ್ ಸುರಂಗ ಮಾರ್ಗ ಯೋಜನೆಯ ವಿರೋಧದ ಕುರಿತು ಮಾತನಾಡಿ, ಯೋಜನೆಯಿಂದ ಲಾಲ್​ಬಾಗ್​ಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲಸದ ಅವಧಿಯಲ್ಲಿ ತಾತ್ಕಾಲಿಕವಾಗಿ ಒಂದು ಎಕರೆ ಪ್ರದೇಶವನ್ನು ಬಳಸಿಕೊಂಡು ನಂತರ ಪಾರ್ಕ್ ಆಗಿ ಮರುಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಸಂಸದ ತೇಜಸ್ವಿ ಸೂರ್ಯ ಅವರ ವಿರೋಧಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಬೆಂಗಳೂರು ನಗರದ ಒಳಗಡೆ ಸುರಂಗ ಮಾರ್ಗ ನಿರ್ಮಿಸುವುದು ಅನಿವಾರ್ಯ. ಮುಂಬೈ ಮತ್ತು ದೆಹಲಿಯಂತಹ ನಗರಗಳಲ್ಲಿಯೂ ಇಂತಹ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ವಿರೋಧಿಗಳ ಮಾತು ಕೇಳಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಜನರಿಗೋಸ್ಕರ ಕೆಲಸ ಮಾಡುತ್ತಿದ್ದೇವೆ ಎಂದರು. ತೇಜಸ್ವಿ ಸೂರ್ಯ ಅವರದ್ದು ಖಾಲಿ ಟ್ರಂಕ್ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *