South Africa vs Sri Lanka: ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ 358 ರನ್ ಕಲೆಹಾಕಿದರೆ, ದ್ವಿತೀಯ ಇನಿಂಗ್ಸ್ನಲ್ಲಿ 317 ರನ್ ಗಳಿಸಿದೆ. ಅತ್ತ ಶ್ರೀಲಂಕಾ ತಂಡವು ಮೊದಲ ಇನಿಂಗ್ಸ್ನಲ್ಲಿ 328 ರನ್ಗಳಿಸಿತ್ತು. ಇದೀಗ ದ್ವಿತೀಯ ಇನಿಂಗ್ಸ್ನಲ್ಲಿ 348 ರನ್ಗಳ ಗುರಿ ಪಡೆದುಕೊಂಡಿದೆ
147 ವರ್ಷಗಳ ಕ್ರಿಕೆಟ್ ಟೆಸ್ಟ್ ಇತಿಹಾಸದಲ್ಲಿ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಭರ್ಜರಿಯ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. ಗೆಬಹಾದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಬವುಮಾ 78 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ 66 ರನ್ ಚಚ್ಚಿದ್ದಾರೆ.
ಇದಕ್ಕೂ ಮುನ್ನ ಡರ್ಬನ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರಥಮ ಇನಿಂಗ್ಸ್ನಲ್ಲಿ 70 ರನ್ ಬಾರಿಸಿದ್ದ ಟೆಂಬಾ ಬವುಮಾ ದ್ವಿತೀಯ ಇನಿಂಗ್ಸ್ನಲ್ಲಿ 113 ರನ್ ಗಳಿಸಿದ್ದರು. ಈ ಮೂಲಕ ಎರಡು ಟೆಸ್ಟ್ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ನಾಲ್ಕು 50+ ಸ್ಕೋರ್ ಗಳಿಸಿದ್ದಾ
ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕು ಇನಿಂಗ್ಸ್ಗಳಲ್ಲಿ ಅರ್ಧಶತಕಕ್ಕಿಂತ ಹೆಚ್ಚಿನ ರನ್ ಕಲೆಹಾಕಿದ ವಿಶ್ವದ ಮೊದಲ ನಾಯಕನೆಂಬ ವಿಶ್ವ ದಾಖಲೆಯನ್ನು ಟೆಂಬಾ ಬವುಮಾ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕೇವಲ ಮೂವರು ಕ್ಯಾಪ್ಟನ್ಗಳು ಮಾತ್ರ 2 ಪಂದ್ಯಗಳ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಅರ್ಧಶತಕ ಬಾರಿಸಿದ್ದರು. ಅವರೆಂದರೆ…
ಝಿಂಬಾಬ್ವೆಯ ಟಟೆಂಡಾ ತೈಬು (2005 ರಲ್ಲಿ ಬಾಂಗ್ಲಾದೇಶ ವಿರುದ್ಧ), ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ (2010 ರಲ್ಲಿ ಭಾರತದ ವಿರುದ್ಧ) ಮತ್ತು ಪಾಕಿಸ್ತಾನದ ಮಿಸ್ಬಾ ಉಲ್ ಹಕ್ (2010 ರಲ್ಲಿ ಸೌತ್ ಆಫ್ರಿಕಾ). ಈ ಮೂವರು ನಾಯಕರುಗಳು 4 ಇನಿಂಗ್ಸ್ಗಳಲ್ಲಿ ಮೂರು ಬಾರಿ 50+ ಸ್ಕೋರ್ಗಳಿಸಿ ದಾಖಲೆ ಬರೆದಿದ್ದರು.
ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಟೆಂಬಾ ಬವುಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಸರಣಿಯ 4 ಇನಿಂಗ್ಸ್ಗಳಲ್ಲೂ 50+ ಸ್ಕೋರ್ ಗಳಿಸುವ ಮೂಲಕ ಬವುಮಾ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ಅಪರೂಪದ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.