ksrtc ಬಸ್ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ.!
ಚಾಮರಾಜನಗರ : ಜಿಲ್ಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ತಾಳಬೆಟ್ಟದ ಪೊನ್ನಾಚಿ ತಿರುವಿನ ಬಳಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಗಾಯಗೊಂಡವರನ್ನು ತಕ್ಷಣ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು.
For More Updates Join our WhatsApp Group :




