KSRTC ಬಸ್ ಯಡವಟ್ಟಿನಿಂದ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ
ಆನೇಕಲ್ : ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದ್ದು, ಘಟನೆಯ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕನ ಯಡವಟ್ಟಿನಿಂದ ಅಪಘಾತ ನಡೆದಿದ್ದು, ಆತ ಏಕಾಏಕಿ ಬ್ರೇಕ್ ಹಾಕಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಬಸ್ಗೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿದ್ದರೆ, ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
For More Updates Join our WhatsApp Group :
