ದಟ್ಟ ಮಂಜಿನಿಂದ ಏಳು ಬಸ್, 3 ಕಾರುಗಳ ಡಿ* – ನಾಲ್ವರು ಮೃತ್ಯು
ನವದೆಹಲಿ: ಮಂಗಳವಾರ ಮುಂಜಾನೆ ಮಥುರಾದ ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ದಟ್ಟವಾದ ಮಂಜಿನಿಂದಾಗಿ ಏಳು ಬಸ್ಗಳು ಹಾಗೂ ಮೂರು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸುಮಾರು 20 ಆಂಬ್ಯುಲೆನ್ಸ್ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಲ್ದೇವ್ ಪೊಲೀಸ್ ಠಾಣೆ ಪ್ರದೇಶದ ಮೈಲ್‌ಸ್ಟೋನ್ 127 ಬಳಿ ಬೆಳಗಿನ ಜಾವ 4ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.ಘಟನೆಯ ನಂತರ ಡಿಎಂ ಮತ್ತು ಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಪೊಲೀಸ್, ಅಗ್ನಿಶಾಮಕ ಇಲಾಖೆ, ಎನ್‌ಎಚ್‌ಎಐ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಕೆಲಸ ಮಾಡುತ್ತಿವೆ.
For More Updates Join our WhatsApp Group :




