KSRTC ಬಸ್–ಲಾರಿ ಮುಖಾಮುಖಿ ಡಿ*.
ಬಾಗಲಕೋಟೆ : ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
For More Updates Join our WhatsApp Group :




