ಭಾಲ್ಕಿಯಲ್ಲಿ ಭೀಕರ ರಸ್ತೆ ಅಪ*ತ.!

ಭಾಲ್ಕಿಯಲ್ಲಿ ಭೀಕರ ರಸ್ತೆ ಅಪ*ತ.!

ಕಳಸದಾಳ ವ್ಯಾಪ್ತಿಯಲ್ಲಿ ಮೂವರು ಯುವಕರ ಸಾ* .

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಕಳಸದಾಳ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಭಾಲ್ಕಿ ಸಮೀಪದ ಮಹಾತ್ಮಾ ಗಾಂಧಿ ಸಕ್ಕರೆ ಕಾರ್ಖಾನೆ ಬಳಿ ಬೈಕ್ ಮತ್ತು ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾರೆ.

ಮೃತರನ್ನು ವಿಠ್ಠಲ ಪಾಂಚಾಳ (25), ಮಹೇಶ್ ಬಿರಾದಾರ (25), ಮತ್ತು ರಾಜೇಂದ್ರ ಪಾಂಚಾಳ (28) ಎಂದು ಗುರುತಿಸಲಾಗಿದೆ. ಸ್ಥಳೀಯರಲ್ಲಿ ಘಟನೆ ಶೋಕದ ವಾತಾವರಣ ಸೃಷ್ಟಿಸಿದೆ.

ಘಟನಾ ಸ್ಥಳಕ್ಕೆ ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೇಗದ ಚಾಲನೆಯೇ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.ಹಾಲಹಳ್ಳಿ ಗ್ರಾಮದ ಬಳಿ ಮೇವು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಸಮಯೋಚಿತ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ.

ಸ್ಥಳೀಯರು ಜೆಸಿಬಿ ಸಹಾಯದಿಂದ ಮೇವನ್ನು ಕೆಳಗೆ ತಳ್ಳಿದ ಪರಿಣಾಮ ಲಾರಿ ಸಂಪೂರ್ಣವಾಗಿ ಸುಟ್ಟುಹೋಗುವುದನ್ನು ತಪ್ಪಿಸಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *