ಗದಗದಲ್ಲಿ ಭೀಕರ ರಸ್ತೆ ಅಪ*ತ

ಗದಗದಲ್ಲಿ ಭೀಕರ ರಸ್ತೆ ಅಪ*ತ

ರೋಣ–ಜಿಗಳೂರು ಕ್ರಾಸ್ ಬಳಿ ಕ್ರೂಸರ್–ಲಾರಿ ಡಿ*.

ಗದಗ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸ್ಥಳಕ್ಕೆ ಗದಗ ಎಸ್ಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ, ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರು ಜನ ಕಾರ್ಮಿಕರಿಗೆ ಕೈ, ಕಾಲು ಮುರಿತವಾಗಿದ್ದು, ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಗಾಯಾಳುಗಳ ಸ್ಥಿತಿ ಕಂಡು ಸಂಬಂಧಿಕರು ಕಣ್ಣೀರು ಹಾಕುವಂತಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *