ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ, ಬಸ್ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 24 ಜನ ಗಾಯಗೊಂಡಿದ್ದಾರೆ. ಜಲ್ಲಿ ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಅಪಘಾತ ನಡೆದ ಸ್ಥಳದ ಬಳಿ ಅಪಾಯಕಾರಿ ತಿರುವೊಂದು ಇದೆ. ಈ ಜಾಗದಲ್ಲಿ ಅತಿ ವೇಗದಲ್ಲಿ ಬಂದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ. ಲಾರಿಯಲ್ಲಿದ್ದ ಜಲ್ಲಿಕಲ್ಲು ಹೆಚ್ಚಿನ ಜೀವಹಾನಿಗೆ ಕಾರಣ ಎನ್ನಲಾಗಿದೆ. ಜಲ್ಲಿಕಲ್ಲುಗಳು ಏಕಾಏಕಿ ಬಸ್ನಲ್ಲಿದ್ದ ಪ್ರಯಾಣಿಕರ ಮೇಲೆ ಬಿದ್ದ ಕಾರಣ, ಹೆಚ್ಚಿನ ಪ್ರಯಾಣಿಕರು ಸಾವನ್ನಪ್ಪಿದರು. ಹತ್ತುಕ್ಕೂ ಹೆಚ್ಚು ಜನರು ಜಲ್ಲಿಕಲ್ಲುಗಳ ಅಡಿಯಲ್ಲಿ ಸಮಾಧಿಯಾದರು.
ಘಟನೆಯಲ್ಲಿ ಮೃತಪಟ್ಟವರಲ್ಲಿ 18 ಮಂದಿ ಬಸ್ ಪ್ರಯಾಣಿಕರು, ಬಸ್ ಮತ್ತು ಟಿಪ್ಪರ್ ಚಾಲಕರು ಸೇರಿದ್ದಾರೆ. ಒಂದು ವರ್ಷದ ಮಗು ಸೇರಿದಂತೆ 11 ಮಹಿಳೆಯರು ಮತ್ತು 9 ಪುರುಷರು ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ 24 ಜನರು ಗಾಯಗೊಂಡಿದ್ದು, 5 ಮಂದಿಯ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.ಅಪಘಾತದ ನಂತರ ಚೆವೆಲ್ಲಾ-ವಿಕಾರಾಬಾದ್ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಗಾಯಾಳುಗಳನ್ನು ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ಜೆಸಿಬಿ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
For More Updates Join our WhatsApp Group :
