ಬೆಳಗಾವಿ ಅಧಿವೇಶನ ಮೋಜು-ಮಸ್ತಿ ಅಲ್ಲ!” – ಆರೋಪಗಳಿಗೆ ಸ್ಪೀಕರ್ U.T ಖಾದರ್ ತಿರುಗೇಟು.

ಬೆಳಗಾವಿ ಅಧಿವೇಶನ ಮೋಜು-ಮಸ್ತಿ ಅಲ್ಲ!” – ಆರೋಪಗಳಿಗೆ ಸ್ಪೀಕರ್ U.T ಖಾದರ್ ತಿರುಗೇಟು.

ಬೀದರ್ : ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್ 8 ರಿಂದ 19 ರ ವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಬೀದರ್​​ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಧಿವೇಶನವು ಯಶಸ್ವಿಯಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನವು ಕೇವಲ ಕಾಲಹರಣವಾಗುತ್ತದೆ, ಮೋಜು-ಮಸ್ತಿಗಾಗಿ ಎಂದು ಹಲವು ವರ್ಷಗಳಿಂದ ಕೇಳಿಬರುತ್ತಿರುವ ಆರೋಪಗಳನ್ನು ಸ್ಪೀಕರ್ ತಳ್ಳಿಹಾಕಿದರು. ನಾವು ಸಕಾರಾತ್ಮಕ ಚಿಂತನೆಯಲ್ಲಿ ಇರಬೇಕು. ಬಹುತೇಕ ಎಲ್ಲ ಶಾಸಕರು ಅಧಿವೇಶನದಲ್ಲಿ ಭಾಗವಹಿಸುತ್ತಾರೆ. ಚರ್ಚೆಗಳು ರಾತ್ರಿ 1, 1:30 ರವರೆಗೂ ನಡೆದಿವೆ ಮತ್ತು ಬಹಳಷ್ಟು ಮಸೂದೆಗಳು ಪಾಸ್ ಆಗಿವೆ ಎಂದು ಸ್ಪೀಕರ್ ಖಾದರ್ ವಿವರಿಸಿದರು.

ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುತ್ತಿರುವ ಈ ಅಧಿವೇಶನಕ್ಕೆ ಜನಸಾಮಾನ್ಯರು, ಮಾಧ್ಯಮದವರು ಮತ್ತು ಸಂಘ-ಸಂಸ್ಥೆಗಳು ಸಹಕಾರ ನೀಡಬೇಕು. ಕರ್ನಾಟಕದ ಜನತೆಗೆ ಪ್ರಯೋಜನವಾಗುವಂತಹ ತೀರ್ಮಾನಗಳನ್ನು ತೆಗೆದುಕೊಳ್ಳಲು ಸದನ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದರು. ಪ್ರತ್ಯೇಕ ರಾಜ್ಯದ ಬೇಡಿಕೆಯ ಕುರಿತು ಕೇಳಿದಾಗ, ಶಾಸಕ ರಾಜು ಕಾಗೆ ಅವರೊಂದಿಗೆ ಈ ಬಗ್ಗೆ ಚರ್ಚಿಸುವುದಾಗಿ ಖಾದರ್ ತಿಳಿಸಿದರು. ಶಾಸಕರು, ಸರ್ಕಾರ ಮತ್ತು ವಿರೋಧ ಪಕ್ಷದವರು ಜನರ ವಿಶ್ವಾಸ ಉಳಿಸಿಕೊಳ್ಳುವ ಜವಾಬ್ದಾರಿ ಇದೆ ಎಂದು ಅವರು ಒತ್ತಿ ಹೇಳಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *