ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ Z ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ Z ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ನವದೆಹಲಿ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಷ್ಟ್ರದಾದ್ಯಂತ ಸುದ್ದಿಯಲ್ಲಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರ ‘Z’ ಕೆಟಗರಿ ಭದ್ರತೆ ಒದಗಿಸಿದೆ.

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಲಿಖಿತ ಆದೇಶ ಹೊರಡಿಸಿದೆ. ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆ ವರದಿಯ ನಂತರ ಸರ್ಕಾರ ಈ ಆದೇಶ ಹೊರಡಿಸಿದ್ದು, ಸಿಆರ್ ಪಿಎಫ್ ಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

CRPF ಸಿಬ್ಬಂದಿ ಭೌತಿಕವಾಗಿ ರಾಜ್ಯಪಾಲರ ಭದ್ರತೆ ವಹಿಸಿಕೊಂಡಿದ್ದು, ಇತರ ಕೆಲವು ಕಾರ್ಯವಿಧಾನಗಳು ಈ ವಾರದೊಳಗೆ ಪೂರ್ಣಗೊಳ್ಳಲಿವೆ. ಕರ್ನಾಟಕದಲ್ಲಿ ಮಾತ್ರ ಗೆಹ್ಲೋಟ್ ಅವರಿಗೆ Z ಕೆಟಗರಿ ಭದ್ರತೆಯನ್ನು ಒದಗಿಸಲಾಗುವುದು ಎಂದು ಮೂಲಗಳು ಹೇಳಿವೆ.

ಜುಲೈ 2021 ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ಥಾವರ್ ಚಂದ್ ಗೆಹ್ಲೋಟ್ಅವರು ಕರ್ನಾಟಕದ 13 ನೇ ರಾಜ್ಯಪಾಲರಾಗಿದ್ದಾರೆ. ಮಧ್ಯಪ್ರದೇಶದಿಂದ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಮೊದಲ ವ್ಯಕ್ತಿಯಾಗಿದ್ದಾರೆ.

Leave a Reply

Your email address will not be published. Required fields are marked *