ರಾಜ್ಯದಲ್ಲಿ ಕಡಿಮೆಯಾಯ್ತು ಚಳಿ.

ರಾಜ್ಯದಲ್ಲಿ ಕಡಿಮೆಯಾಯ್ತು ಚಳಿ.

ಕರ್ನಾಟಕ ಹವಾಮಾನ ಸಂಕ್ಷಿಪ್ತ ವರದಿ

ಬೆಂಗಳೂರು : ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 23.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 23.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 23.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *