ಆರ್ ಎಸ್ ಎಸ್ ಬಿಜೆಪಿಯವರು ಸಂವಿಧಾನ ವಿರೋಧಿಗಳು.!
ಬೆಂಗಳೂರು : .ಬಾಬಾಸಾಹೇಬ್ ಅಂಬೇಡ್ಕರ್ ರವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾII ಬಿ ಆರ್ ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.ಬಾಬಾಸಾಹೇಬ್ ಅಂಬೇಡ್ಕರ್ ರವರು ಕೇವಲ ದಲಿತರಿಗೆ ಮಾತ್ರವಲ್ಲದೇ, ಇಡೀ ಜಗತ್ತಿನ ನಾಯಕರಾಗಿದ್ದರು. ಭಾರತಕ್ಕೆ ಅತ್ಯಂತ ಯೋಗ್ಯವಾದ ಸಂವಿಧಾನ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. 1950 ಜನವರಿ 26 ರಂದು ಭಾರತದ ಸಂವಿಧಾನ ಜಾರಿಗೆ ಬರಲಿದ್ದು, ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡಲಿದ್ದೇವೆ. ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಲಭಿಸಿದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಫಲಿಸುತ್ತದೆ ಎಂದಿದ್ದರು. ಒಬ್ಬ ವ್ಯಕ್ತಿ , ಒಂದು ವೋಟು, ಒಂದು ಮೌಲ್ಯ ಎಂದು ಸಂವಿಧಾನ ತಿಳಿಸಿದ್ದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವಗಳ ಮೇಲೆ ಸಂವಿಧಾನ ನಿಂತಿದೆ. ಸಂವಿಧಾನ ಜಾರಿಯಾಗಿ 76 ವರ್ಷಗಳು ಕಳೆದರೂ ಸಮಾಜದಲ್ಲಿನ ಅಸಮಾನತೆ ಹೋಗಿಲ್ಲ ಎಂದರು.
ಬಿಜೆಪಿ-ಆರ್ ಎಸ್ ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ: ಅಂದು ಆರ್ ಎಸ್ ಎಸ್ ನ ಮುಖವಾಣಿಯಾಗಿದ್ದ ಆರ್ಗನೈಸರ್ ಪತ್ರಿಕೆಯಲ್ಲಿ ಸಂವಿಧಾನವನ್ನು ವಿರೋಧಿಸಿದ್ದರು. ಆದರೆ ಈಗ ಆರ್ ಎಸ್ ಎಸ್ –ಬಿಜೆಪಿಯವರು ಅಂಬೇಡ್ಕರ್ ರವರನ್ನು ಹೊಗಳುತ್ತಿದ್ದಾರೆ. ಅವರ ಸೋಲಿಗೆ ಕಮ್ಯುನಿಷ್ಟ್ ಪಕ್ಷದ ಎಸ್.ಎ.ಡಾಂಗೆ ಮತ್ತು ಹಿಂದುತ್ವ ನಾಯಕ ವಿ.ಡಿ.ಸಾರ್ವರ್ಕರ್ ರವರು ಕಾರಣರಾಗಿದ್ದರು ಎಂದು ಅಂಬೇಡ್ಕರ್ ರವರು ಬರೆದುಕೊಂಡಿದ್ದಾರೆ. ಆದರೆ ಚುನಾವಣೆಯಲ್ಲಿ ಅಂಬೇಡ್ಕರ್ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಾರೆ. ಬಿಜೆಪಿಯವರು ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಾಗಲೀ ಅಥವಾ ಸಂವಿಧಾನದ ಪರವಾಗಿರಲಿಲ್ಲ. ಆರ್ ಎಸ್ ಎಸ್ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಆರ್ ಎಸ್ ಎಸ್ ಹೆಡ್ಗೆವಾರ್ ಅವರು ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ ಎಂದರು.
For More Updates Join our WhatsApp Group :




