ಹಾಸನ: ಹಾಸನಾಂಬೆ ದೇವಿ ದರ್ಶನೋತ್ಸವ ವೇಳೆ ಪೊಲೀಸ್ ಮತ್ತು ಜಿಲ್ಲಾಧಿಕಾರಿ ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದೆ. ಇದೇ ಕಾರಣಕ್ಕೆಹಾಸನ ಡಿಸಿ ಸಿ.ಸತ್ಯಭಾಮಾ ಸಾರ್ವಜನಿಕವಾಗಿಯೇ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನೊಂದೆಡೆ ಪೊಲೀಸ್ ಅಧಿಕಾರಿ ಕೂಡ ತಾವೇನು ಕಮ್ಮಿ ಎನ್ನುವಂತೆ ಡಿಸಿ ಸತ್ಯಭಾಮಾ ಅವರಿಗೆ ಅವಾಜ್ ಹಾಕಿರುವ ಘಟನೆ ನಡೆದಿದೆ. ಮಾರಾಮಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿ ಸತ್ಯಭಾಮಾ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಡಿಸಿ ಗರಂ ಆಗಿದ್ದರು. ಶಿಷ್ಟಾಚಾರದ ವಾಹನ ತಡೆದಿದ್ದಕ್ಕೆ ಜಿಲ್ಲಾಧಿಕಾರಿಪಿಎ ಶಶಿ ಹಾಗೂ ಸಬ್ಇನ್ಸ್ಪೆಕ್ಟರ್ ನಡುವೆ ಮಾರಾಮಾರಿ ನಡೆದಿತ್ತು.
ಡಿಸಿ ಪಿಎ ಶಶಿ ಎಂಬಾತನನ್ನು ಪೊಲೀಸರು ಹೊರಗೆ ತಳ್ಳಿದ್ದರು ಎನ್ನಲಾಗಿತ್ತು. ಈ ವೇಳೆ ಸಿಸಿಟಿವಿ ಪರಿಶೀಲನೆ ಮುಖ್ಯದ್ವಾರದ ಬಳಿ ಡಿಸಿ ಸಿ.ಸತ್ಯಭಾಮ ಬಂದಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿ ಅಮಾನತು ಮಾಡಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.