ಬಡವರ ಬಗ್ಗೆ ಕಾಳಜಿ ಇಲ್ಲವೆಂಬುದು ಇಂದಿರಾ ಕ್ಯಾಂಟೀನ್ ಮುಚ್ಚಿದ್ದರಿಂದಲೇ ಗೊತ್ತಾಗುತ್ತದೆ- ವಿಜಯೇಂದ್ರ

ಬೆಂಗಳೂರಿನಲ್ಲಿ 11 ಇಂದಿರಾ ಕ್ಯಾಂಟೀನ್ಗಳನ್ನು ಮುಚ್ಚಲಾಗಿದೆ ಎಂಬ ವರದಿಯ ವಿಚಾರವಾಗಿ ರ‍್ನಾಟಕ ಕಾಂಗ್ರೆಸ್ ರ‍್ಕಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಈ ಹಿಂದೆ ಬಿಜೆಪಿ ರ‍್ಕಾರ ಇದ್ದಾಗ ಹಿಂದಿನ ಕ್ಯಾಂಟೀನ್ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್ ಪಕ್ಷದವರು ಈಗೇನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಹಿಂದಿನ ರ‍್ಕಾರದಲ್ಲಿ ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ಗಳನ್ನು ತೆರೆದಿರುವ ಬಗ್ಗೆ ಹೆಮ್ಮೆಪಟ್ಟು ಕೊಂಡಿದ್ದ ಕಾಂಗ್ರೆಸ್ಸಿಗರೇ, ಕಳೆದ ಬಾರಿಯ ನಮ್ಮ ಬಿಜೆಪಿ ರ‍್ಕಾರದ ಆಡಳಿತ ಅವಧಿಯಲ್ಲಿ ಕ್ಯಾಂಟೀನ್ಗಳನ್ನು ನಾವು ಮುಚ್ಚಿಸಲು ಹೊರಟಿದ್ದೇವೆ ಎಂದು ಅಪಪ್ರಚಾರ ನಡೆಸಿದಿರಿ. ಆದರೆ ಈಗೇನಾಗುತ್ತಿದೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಬಡವರು ಹಾಗೂ ಶ್ರಮಿಕ ರ‍್ಗದವರಿಗೆ ಹಸಿವು ನೀಗಿಸುತ್ತಿದ್ದ ನಿಮ್ಮದೇ ಯೋಜನೆಯ ಇಂದಿರಾ ಕ್ಯಾಂಟೀನ್ ಮುಚ್ಚಿಸುತ್ತಿದ್ದೀರಿ. ಬಡವರ ಬಗ್ಗೆ, ಹಸಿದವರ ಬಗ್ಗೆ, ನಿಮಗೆ ಪ್ರಾಮಾಣಿಕ ಕಾಳಜಿ ಇದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಗ್ಯಾರಂಟಿ ಯೋಜನೆಗಳನ್ನು ಮಾತ್ರ ಕೇಂದ್ರೀಕರಿಸಿರುವ ನೀವು ಅದನ್ನೂ ಪರಿಪರ‍್ಣವಾಗಿ ನಿಭಾಯಿಸಲಾಗದೆ, ರ‍್ಥಿಕ ಸಮತೋಲನ ಕಾಯ್ದುಕೊಳ್ಳಲಾಗದೆ, ರಾಜ್ಯದ ಬೊಕ್ಕಸ ಬರಿದು ಮಾಡಿ ಹಿಂದುಳಿದವರು, ದಲಿತರ ಕಲ್ಯಾಣ ಕರ‍್ಯಗಳನ್ನು ಮೂಲೆಗೊತ್ತಿ ಇದೀಗ ಬೀದಿಬದಿ ವ್ಯಾಪಾರ ಮಾಡಿ ಜೀವನ ಸಾಗಿಸುವ ಶ್ರಮಿಕ ರ‍್ಗ ಹಾಗೂ ಬಡವರಿಗೆ ಹಸಿವು ನೀಗಿಸುವ ತಾಣವಾಗಿದೆ ಎಂದು ಹೇಳಿಕೊಳ್ಳುತ್ತಿದ್ದ ನಿಮ್ಮ ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚಿಸಲು ಹೊರಟಿದ್ದೀರಿ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ರ‍್ಕಾರದ ಕರ‍್ಯವೈಖರಿ ನೋಡಿದರೆ ರ‍್ನಾಟಕದ ಚಲನಶೀಲತೆಗೆ ತುಕ್ಕು ಹಿಡಿಸಲು ಹೊರಟಂತಿದೆ. ಇಂದಿರಾ ಕ್ಯಾಂಟೀನ್ಗೆ ಆಗುತ್ತಿರುವ ಗತಿಯೇ ಬಡವರ ಇತರ ಯೋಜನೆಗಳಿಗೂ ಆಗುವುದು ನಿಶ್ಚಿತ ಎಂಬುದು ರ‍್ಕಾರದ ರ‍್ಥಿಕ ಸ್ಥಿತಿಗತಿಯನ್ನು ಗಮನಿಸಿದರೆ ವೇದ್ಯವಾಗುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *