ರೇಣುಕಾ ಸ್ವಾಮಿ ಕೊಲೆಯಾದ ಒಂದೂವರೆ ವರ್ಷದ ಬಳಿಕ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಆಗಲಿದೆ. ಇಂದು ದೋಷಾರೋಪ ನಿಗದಿ ಆಗಲಿತ್ತು ಆದರೆ ಅದು ನವೆಂಬರ್ 3ಕ್ಕೆ ಮುಂದೂಡಲಾಗಿದೆ. ನವೆಂಬರ್ 3 ರಂದು ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಇಂದು (ಅಕ್ಟೊಭರ್ 31) ಆಗುವುದಕ್ಕಿತ್ತು. ಆದರೆ ದೋಷಾರೋಪ ನಿಗದಿಯನ್ನು ನ್ಯಾಯಾಲಯವು ನವೆಂಬರ್ 3ಕ್ಕೆ ಮುಂದೂಡಲಾಗಿದೆ. ಇಂದು ದರ್ಶನ್ ಹಾಗೂ ಇತರೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಆದರೆ ಕೆಲವೇ ನಿಮಿಷಕ್ಕೆ ವಿಚಾರಣೆ ಮುಗಿದಿದ್ದು, ದೋಷಾರೋಪ ನಿಗದಿಯನ್ನು ಮುಂದೂಡಲಾಗಿದೆ. ಅಲ್ಲದೆ ದೋಷಾರೋಪ ನಿಗದಿ ಮಾಡುವ ದಿನದಂದು ಕಡ್ಡಾಯವಾಗಿ ಎಲ್ಲ ಆರೋಪಿಗಳು ಹಾಜರಿರಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ.
For More Updates Join our WhatsApp Group :
