ಬೆಂಗಳೂರು : ಆಗಸ್ಟ್ 10 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆರ್.ವಿ.ರೋಡ್ ಹಾಗೂ ಬೊಮ್ಮಸಂದ್ರ ಮಧ್ಯೆ ಸಂಚರಿಸುವ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ ತೋರಿದರು. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಟ್ರಾಫಿಕ್ ಹೆಚ್ಚಿರುವ ಮತ್ತು ಐಟಿಬಿಟಿ ಪಾರ್ಕ್ಗಳು, ಇಂಡಸ್ಟ್ರಿಯಲ್ ಟೌನ್ಗಳನ್ನು ಸಂಪರ್ಕಿಸುವಂತೆ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲು ಬಿಎಂಆರ್ಸಿಎಲ್ ಅಧಿಕಾರಿಗಳು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಶೇ 90 ರಷ್ಟು ಕಾಮಗಾರಿ ಮುಗಿದಿದೆ. ಆರು ಎಲಿವೇಟೆಡ್ ಮೆಟ್ರೋ ಸ್ಟೇಷನ್ಗಳನ್ನು ಮುಂದಿನ ವರ್ಷದಲ್ಲಿ ಲೋಕಾರ್ಪಣೆ ಮಾಡಲು ಉದ್ದೇಶಿಸಲಾಗಿದೆ. ಇದೀಗ ಈ ಮಾರ್ಗವನ್ನು ಕಾಡುಗೋಡಿ ಟ್ರೀ ಪಾರ್ಕ್ ವರೆಗೆ ವಿಸ್ತರಣೆ ಮಾಡಲು ಬಿಎಂಆರ್ಸಿಎಲ್ ಮುಂದಾಗಿದೆ. ಈ ಮಾರ್ಗ ಓಪನ್ ಆದರೆ, ಬೆಂಗಳೂರಿನಲ್ಲೇ ಅತಿ ಉದ್ದದ ಮೆಟ್ರೋ ಮಾರ್ಗವಾಗಲಿದೆ.
ಪಿಂಕ್ ಲೈನ್ ಮೆಟ್ರೋ ಸಂಚಾರ ಎಲ್ಲೆಲ್ಲಿ?
ಪಿಂಕ್ ಲೈನ್ ಮೆಟ್ರೋ ಮಾರ್ಗವು ಕಾಳೇನ ಅಗ್ರಹಾರ (ಗೊಟ್ಟಿಗೆರೆ) ಜಿಗಣಿ, ಆನೇಕಲ್, ಅತ್ತಿಬೆಲೆ, ಸರ್ಜಾಪುರ, ವರ್ತೂರು, ಕಾಡುಗೋಡಿ ಟ್ರೀ ಪಾರ್ಕ್ (68 ಕಿಮೀ) ಮಾರ್ಗದಲ್ಲಿ ಸಂಚಾರ ಮಾಡಲಿದೆ.ಈ ಮೆಟ್ರೋ ಮಾರ್ಗಕ್ಕಾಗಿ ಫಿಸಿಬಿಲಿಟಿ ಟೆಸ್ಟ್ ಮಾಡಲು ಬಿಎಂಆರ್ಸಿಎಲ್ ಮುಂದಾಗಿದೆ.
ಪಿಂಕ್ ಲೈನ್ ಮೆಟ್ರೋ: ಎಷ್ಟಿರಲಿವೆ ನಿಲ್ದಾಣಗಳು?
ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಅಂದಾಜು 50 ಮೆಟ್ರೋ ಸ್ಟೇಷನ್ಗಳನ್ನು ನಿರ್ಮಾಣ ಮಾಡಲು ಬಿಎಂಆರ್ಸಿಎಲ್ ಚಿಂತನೆ ನಡೆಸಿದೆ. ಫೀಸಿಬಿಲಿಟಿ ಟೆಸ್ಟ್ ರಿಪೋರ್ಟ್ ಕೈಸೇರುತ್ತಿದ್ದಂತೆಯೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಬಿಎಂಆರ್ಸಿಎಲ್ ಮುಂದಾಗಲಿದೆ.
ಇತ್ತ ಅತ್ತಿಬೆಲೆ ಬಳಿ ಕೆಹೆಚ್ಬಿ 90,000 ಸಾವಿರ ಆಸನಗಳ ಸಾಮರ್ಥ್ಯದ ಕ್ರೀಡಾಂಗಣವನ್ನು ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದು, ಪಿಂಕ್ ಲೈನ್ ವಿಸ್ತರಿಸುವುದರಿಂದ ಪ್ರೇಕ್ಷಕರು ಬಂದು ಹೋಗಲು ಸಹಾಯ ಆಗಲಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
For More Updates Join our WhatsApp Group :