ಭೈರತಿ ರಣಗಲ್’ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್ ಟಾಕ್ ಆಗುತ್ತಿರುವ ಸಿನಿಮಾ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಎರಡು ಶೇಡ್ನಲ್ಲಿ ಕಾಣಿಸಿಕೊಳ್ಳಲಿರುವ ಭೈರತಿ ರಣಗಲ್ ಈಗಾಗಲೇ ಟೀಸರ್ನಿಂದಲೇ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.
ಕನ್ನಡದ ಬಹುನಿರೀಕ್ಷಿತ ಚಿತ್ರ ಆಗಸ್ಟ್ 15ರಂದೇ ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಬಿಡುಗಡೆ ದಿನಾಂಕ ಮುಂದೆ ಹೋಯ್ತು. ಆನಂತರ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಈ ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂದು ಕಾತುರದಿಂದ ಕಾಯುತ್ತಿದ್ದರು. ಆ ಪ್ರಶ್ನೆಗೀಗ ಉತ್ತರ ಸಿಕ್ಕಿದೆ.
ಬೆಂಗಳೂರಿನ ಯಲಹಂಕದಲ್ಲಿರುವ ಗ್ಯಾಲೇರಿಯಾ ಮಾಲ್ನಲ್ಲಿ ಇದೇ ಮೊದಲ ಬಾರಿಗೆ ವಿನೂತನವಾಗಿ ಚಿತ್ರಿಸಲಾಗಿರುವ ”Graffiti Art” ಅನ್ನು ಅನಾವರಣಗೊಳಿಸುವ ಮೂಲಕ “ಭೈರತಿ ರಣಗಲ್” ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಯಿತು. ಬಹುನಿರೀಕ್ಷಿತ ಚಿತ್ರ ನವೆಂಬರ್ 15ರಂದು ಅದ್ಧೂರಿಯಾಗಿ ಬಿಡುಗಡೆ ಆಗಲಿದೆ.
ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್, ನಿರ್ದೇಶಕ ನರ್ತನ್ ಹಾಗೂ ನಿವೇದಿತಾ ಶಿವರಾಜ್ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಹಸ್ರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು. ಗ್ರ್ಯಾಫಿಟಿ ಆರ್ಟ್ನಲ್ಲಿ ಮೂಡಿಬಂದ ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಅವರ ಲುಕ್ಗೆ ಅಭಿಮಾನಿಗಳು ಫಿದಾ ಆದರು.