ಲಾರಿ–ಕ್ರೂಸರ್ ಭೀಕರ ಅಪ*ತ.

ಲಾರಿ–ಕ್ರೂಸರ್ ಭೀಕರ ಅಪ*ತ.

ತುಮಕೂರು ಬಳಿ ನಾಲ್ವರು ಮೃತ್ಯು, 7 ಮಂದಿ ಗಂಭೀರ

ತುಮಕೂರು : ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಸಮೀಪ ಬೆಳ್ಳಾವಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಶುಕ್ರವಾರ ಬೆಳಗಿನ ಜಾವ ಕ್ರೂಸರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದು ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಹಾಗೂ ಗಾಯಾಳುಗಳು ಎಲ್ಲರೂ ಕೊಪ್ಪಳ ಜಿಲ್ಲೆಯ ಮೂಲದ ಅಯ್ಯಪ್ಪ ಮಾಲಾಧಾರಿಗಳು ಎಂದು ಎಸ್ ಪಿ ಅಶೋಕ್ ತಿಳಿಸಿದ್ದಾರೆ.

ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದು ಕ್ರೂಸರ್ ವಾಹನದಲ್ಲಿ ವಾಪಸ್ ಕೊಪ್ಪಳಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಶ್ರೀನಿವಾಸ್, ಪ್ರವೀಣ್ ಕುಮಾರ್, ರಾಜಪ್ಪ, ಹುಲಿಗಪ್ಪ, ರಾಕೇಶ್, ತಿರುಪತಿ ಹಾಗೂ ಮತ್ತೊಬ್ಬ ಶ್ರೀನಿವಾಸ್ ಸೇರಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಕಳುಹಿಸಲಾಗಿದೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕ ನಿದ್ರೆಯಲ್ಲಿ ಅಪಘಾತ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕ್ರೂಸರ್ ಚಾಲಕ ಮತ್ತು ಲಾರಿ ಚಾಲಕನ ಮೇಲೂ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *