ಉತ್ತರ ಪ್ರದೇಶ: ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದ ಆತಂಕಕಾರಿ ಘಟನೆಯೊಂದರಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಇದು ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಮೂಡಿಸಿದೆ. ಈ ವಿಷಯ ತಿಳಿದ ಕಡಲೆ ತನಿಖೆ ನಡೆಸಿದ ಪೊಲೀಸರು ಅವರಿಬ್ಬರೂ ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಿದ್ದಾರೆ. ಮೃತರನ್ನು ರಾಮ್ಗೋಪಾಲ್ ಶರ್ಮಾ ಅವರ ಮಗ 27 ವರ್ಷದ ಸಚಿನ್ ಮತ್ತು ಟುಕಿ ರಾಮ್ ಅವರ ಮಗ 50 ವರ್ಷದ ಲಕ್ಷ್ಮಿ ಶಂಕರ್ ಎಂದು ಗುರುತಿಸಲಾಗಿದೆ. ಇಬ್ಬರೂ ಗಾಜಿಯಾಬಾದ್ ನಿವಾಸಿಗಳು.
ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸಲು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
“ಮೃತದೇಹಗಳ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಅವರು ವಾಹನದೊಳಗೆ ಮದ್ಯ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿರುವಂತೆ ತೋರುತ್ತದೆ. ಗಾಳಿಯ ಕೊರತೆ ಮತ್ತು ಕಾರಿನೊಳಗೆ ಕಿಟಕಿ ಹಾಕಿಕೊಂಡು ದೀರ್ಘಕಾಲ ಕುಳಿತಿದ್ದ ಕಾರಣದಿಂದಾಗಿ ಅವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿರಬಹುದು” ಎಂದು ತನಿಖೆಯಲ್ಲಿ ತೊಡಗಿರುವ ಹಿರಿಯ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
For More Updates Join our WhatsApp Group :