ಮುಂದಿನ ಸಿಎಂ ಸತೀಶ್ ಜಾರಕಿಹೊಳಿ, ಸಚಿವರ ಸಮ್ಮುಖದಲ್ಲೇ ಘೋಷಣೆʼ

ಮುಂದಿನ ಸಿಎಂ ಸತೀಶ್ ಜಾರಕಿಹೊಳಿ, ಸಚಿವರ ಸಮ್ಮುಖದಲ್ಲೇ ಘೋಷಣೆʼ

ತುಮಕೂರು : ಮುಡಾ ಹಗರಣದ A2 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಾತ್ರವಲ್ಲದೇ ಕಾಂಗ್ರೆಸ್ ಕೆಲ ನಾಯಕರು ಸಹ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆಯ ಗುಸು ಗುಡು ಕೈ ಪಾಳಯದಲ್ಲಿ ಜೋರಾಗಿದ್ದು, ಈ ಬೆಳವಣೆಗೆಯ ಮಧ್ಯ ಸಚಿವ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇತ್ತ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ಹೋದ ಕಡೆ ಎಲ್ಲಾ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಘೋಷಣೆ ಕೂಗುತ್ತಿದ್ದಾರೆ.

ಇನ್ನೂ ತುಮಕೂರು ನಗರದಲ್ಲಿ ನಡೆಯುತ್ತಿದ್ದ ಡಿಎಸ್ಎಸ್ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂಬ ಘೋಷಣೆ ಕೇಳಿಬಂದಿದೆ. ಸತೀಶ್ ಜಾರಕಿಹೊಳಿಯವರ ಸಮ್ಮುಖದಲ್ಲೇ ಈ ಘೋಷಣೆ ಹೊರಬಿದ್ದಿದೆ. ಇದನ್ನು ತಡೆಯುವ ಪ್ರಯತ್ನವನ್ನು ಸಚಿವರಾ ಸತೀಶ್ ಜಾರಕಿಹೊಳಿ ಮಾಡಲಿಲ್ಲ. ಕಾಂಗ್ರೆಸ್ ನಲ್ಲಿ ಮೊದಲಿನಿಂದಲೂ ದಲಿತ ಸಿಎಂ ಕೂಗು ಕೇಳಿ ಬಂದಿತ್ತು. ಇದೀಗ ಮುಡಾ ಹಗರಣದ ಕುರಿತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ್ತಾರೆ ಎನ್ನುವ ಚರ್ಚೆ ಬೆನ್ನಲ್ಲೇ ಮತ್ತೆ ದಲಿತ ಸಿಎಂ ಕೂಗು ಕೇಳಿ ಬಂದಿದೆ.

ದಲಿತ ಸಿಎಂ ಗಾದಿಯ ಚರ್ಚೆ ಹೊತ್ತಲ್ಲೇ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿದ್ದರು. ಇದೀಗ ತುಮಕೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಅವರನ್ನು ಸತೀಶ್ ಜಾರಕಿಹೊಳಿ ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇತ್ತೀಚಿಗೆ ಪರಮೇಶ್ವರ್-ಸತೀಶ್ ಜಾರಕಿಹೊಳಿ ನಡುವೆ 4-5 ಬಾರಿ ಭೇಟಿ ಮಾಡಿರುವುದು ಹಲವು ಪ್ರಶ್ನೆಗಳು ಹುಟ್ಟಿಕೊಳ್ಳುವಂತೆ ಮಾಡಿದೆ.

ಇನ್ನೂ ಈ ಕುರಿತು ಮಾಧ್ಯಮಗಳ ಜೊತೆಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ಕೂಗು ಶುರು ಮಾಡಿದರೆ ನಾನೇನು ಮಾಡಲಿ? ಈ ಭೇಟಿಯಲ್ಲಿ ಏನು ವಿಶೇಷ ಇಲ್ಲ. ಪರಮೇಶ್ವರ್ ಊಟ ಮಾಡಿಸಿದ್ರು ಅಷ್ಟೇ. ನನ್ನದು ಬೇರೆ ಕಾರ್ಯಕ್ರಮ ಇತ್ತು. ಅಲ್ಲಿಗೆ ಬಂದಿದ್ದೆ, ಹಾಗೆ ಇಲ್ಲಿಗೂ ಬಂದಿದ್ದೆ ಅಷ್ಟೇ. ನಾವು ಸಿಎಂಗೆ ರಾಜೀನಾಮೆ ಕೊಡೋದು ಬೇಡ ಎಂದು ಹೇಳಿದ್ದೇವೆ. ದಲಿತ ಸಿಎಂ ಪ್ರಸ್ತಾವನೆ ಸಧ್ಯಕ್ಕಿಲ್ಲ. ಇದ್ದಾಗ ನಾವೇ ಕರೆದು ಹೇಳುತ್ತೇವೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *