‘ರೋಮಿಯೋ ಲೇನ್’ ಮಾಲೀಕರು ಥೈಲ್ಯಾಂಡ್‌ನಲ್ಲಿ ಅರೆಸ್ಟ್.

‘ರೋಮಿಯೋ ಲೇನ್’ ಮಾಲೀಕರು ಥೈಲ್ಯಾಂಡ್‌ನಲ್ಲಿ ಅರೆಸ್ಟ್.

ನೈಟ್​ಕ್ಲಬ್​ ಮಾಲೀಕರ ಬಂಧನ,25 ಸಾ*ಗಳ ಭೀಕರ ದುರಂತಕ್ಕೆ ತಿರುವು.

ಪಣಜಿ : ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಥೈಲ್ಯಾಂಡ್ ​ಗೆ ಪರಾರಿಯಾಗಿದ್ದ ಗೋವಾದ ರೋಮಿಯೋ ಲೇನ್ ನೈಟ್​ಕ್ಲಬ್ ಮಾಲೀಕರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಕ್ಲಬ್​ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯನ್ನು ಗೋವಾ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ದುರಂತದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ರೋಮಿಯೋ ಲೇನ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡಿದ್ದರು.

ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿಯ ನಂತರ ದೇಶದಿಂದ ಪಲಾಯನ ಮಾಡಿದ ಲೂತ್ರಾ ಸಹೋದರರ ಒಡೆತನದ ಗೋವಾದ ವಾಗೇಟರ್ ಪ್ರದೇಶದಲ್ಲಿರುವ ರೋಮಿಯೋ ಲೇನ್ ರೆಸ್ಟೋರೆಂಟ್ ಅನ್ನು ಕೆಡವಲಾಯಿತು. ಗೌರವ್ ಲೂತ್ರಾ ಮತ್ತು ಸೌರಭ್ ಲೂತ್ರಾ ಇದರ ಮಾಲೀಕರು.

ರೋಮಿಯೋ ಲೇನ್ ಬಳಿ ಇರುವ ಅವರ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್ ಡಿಸೆಂಬರ್ 7 ರಂದು ಬೆಂಕಿಗೆ ಆಹುತಿಯಾಗಿ 25 ಜನರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕ್ಲಬ್​ನ ಮಾಲೀಕರನ್ನು ಥೈಲ್ಯಾಂಡ್​ನಲ್ಲಿ ಬಂಧಿಸಲಾಗಿದೆ. ಶೀಘ್ರದಲ್ಲೇ ಭಾರತಕ್ಕೆ ಕರೆತರುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಹೊಸ ವರ್ಷದ ಆಚರಣೆಗಾಗಿ ಹೆಚ್ಚಿನ ಸಂಖ್ಯೆಯ ಸ್ಥಳೀಯರು ಮತ್ತು ವಿದೇಶಿಯರು ಗೋವಾಕ್ಕೆ ಆಗಮಿಸುತ್ತಿರುವ ಸಮಯದಲ್ಲಿ ಗೋವಾ ನೈಟ್‌ಕ್ಲಬ್ ಬೆಂಕಿ ದುರಂತ ಸಂಭವಿಸಿದೆ.

ಕ್ಲಬ್‌ನ ನಾಲ್ವರು ಮಾಲೀಕರ ಪೈಕಿ ಒಬ್ಬನನ್ನು ಪೊಲೀಸರು ಬುಧವಾರ ಬಂಧಿಸಿದ್ದರು. ಅಜಯ್ ಗುಪ್ತಾನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಲುಕ್‌ಔಟ್ ನೋಟಿಸ್ ಹೊರಡಿಸಿದ ಬಳಿಕ ಬಂಧಿಸಲಾಗಿದೆ. ಬೆನ್ನುಮೂಳೆಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಗುಪ್ತಾ ದೆಹಲಿಯ ಲಜಪತ್ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದರು.

ಗೋವಾದ ಅರ್ಪೋರಾದ ಜನಪ್ರಿಯ ನೈಟ್‌ಕ್ಲಬ್‌ನಲ್ಲಿ ಹಲವಾರು ಸುರಕ್ಷತಾ ಅಪಾಯಗಳ ಪರಿಣಾಮವಾಗಿ ಸಂಭವಿಸಿದ ಬೆಂಕಿಯ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ಗೋವಾ ಪೊಲೀಸರು ಅವರ ಪಾಸ್‌ಪೋರ್ಟ್‌ಗಳನ್ನು ಅಮಾನತುಗೊಳಿಸಿ ವಿದೇಶಾಂಗ ಸಚಿವಾಲಯವನ್ನು ವಿನಂತಿಸಿದ ಸ್ವಲ್ಪ ಸಮಯದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *