ಸಹಕಾರಿ ಸಂಘದ ಒಳ ನುಗ್ಗಿದ ಕಳ್ಳನನ್ನು 10 ನಿಮಿಷದಲ್ಲಿ ಸೆರೆ ಹಿಡಿದ ಪೊಲೀಸರು

ಗಂಗೊಳ್ಳಿ: ಹೊಸಾಡು ಶಾಖೆಯ ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಕಿಟಿಕಿಯ ಸರಳು ಮುರಿದು ಕಳ್ಳತನ ನಡೆದಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿದ 10 ನಿಮಿಷದಲ್ಲೇ ಕಳ್ಳನನ್ನು ಹಿಡಿದ ಘಟನೆ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ.

ರಾತ್ರಿ ಸುಮಾರು 1.47 ಕ್ಕೆ ಮುಳ್ಳಿಕಟ್ಟೆಯಲ್ಲಿರುವ ಸಹಕಾರಿ ಸಂಘ ಕಿಟಕಿಯ ಗ್ರಿಲ್ ಒಡೆದು ಕಳ್ಳ ಒಳನುಗ್ಗಿದ್ದಾನೆ .

ಕುಂದಾಪುರ ಅಂಕದಕಟ್ಟೆಯಲ್ಲಿರುವ ಸೈನ್ ಇನ್ ಸೆಕ್ಯುರಿಟಿಯ ಸಿಸಿಟಿವಿ ಲೈವ್ ಮಾನಿಟರಿಂಗ್ ನಲ್ಲಿ ಘಟನೆ ಬೆಳಕಿಗೆ ಬಂದು ಬೀಟ್ ಪೊಲೀಸರಿಗೆ ಮಾಹಿತಿ ನೀಡಲಾಯಿತು.

10 ನಿಮಿಷದಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ಕಳ್ಳನನ್ನು ಹಿಡಿದರು. ಕಳ್ಳ ಕೇರಳದಿಂದ ಬಂದವನು ಎನ್ನಲಾಗಿದೆ. ಪೊಲೀಸ್ ಇಲಾಖೆಯಿಂದ ಹೆಚ್ಚಿನ ಮಾಹಿತಿ ಕುರಿತು ತನಿಖೆ ನಡೆಯುತ್ತಿದೆ.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಲೈವ್ ಮಾನಿಟರಿಂಗ್ ಸಿಬ್ಬಂದಿ, ಗಂಗೊಳ್ಳಿ ಪೊಲೀಸರ ಸಮಯಪ್ರಜ್ಞೆಯಿಂದ ಕಳ್ಳನನ್ನು ತಕ್ಷಣ ಸೆರೆ ಹಿಡಿಯಲು ಸಾಧ್ಯವಾಗಿದೆ.

Leave a Reply

Your email address will not be published. Required fields are marked *