ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: N.ಚಲುವರಾಯಸ್ವಾಮಿ

ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: N.ಚಲುವರಾಯಸ್ವಾಮಿ

ಹೊಸ ಯೋಜನೆಗಳು, ತಂತ್ರಜ್ಞಾನ ಮತ್ತು ಮಾರುಕಟ್ಟೆ ವಿಸ್ತರಣೆ.

ಬೆಂಗಳೂರು: ರಾಜ್ಯದಲ್ಲಿ ಕೃಷಿ ಹಾಗೂ ಕೃಷಿ ತಂತ್ರಜ್ಞಾನ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿರುವ ಸರ್ಕಾರವು, ಕೃಷಿಕರ ಅಭಿವೃದ್ಧಿಗೆ ಹಲವು ಯೋಜನೆಗಳನ್ನ ಕಾರ್ಯಗತಗೊಳಿಸಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ತಿಳಿಸಿದರು..

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ರಿ-ಟೆಕ್ ಸಮಿಟ್-2026ರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕೃಷಿ ಸಚಿವರು,ರಾಜ್ಯ ಆರ್ಥಿಕತೆಯಲ್ಲಿ ಕೃಷಿಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಒಟ್ಟು ರಾಜ್ಯದ ಆದಾಯದಲ್ಲಿ ಶೇಕಡಾ 17ರಷ್ಟು ಕೊಡುಗೆ ನೀಡುವುದರೊಂದಿಗೆ, ಶೇಕಡಾ 58ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುವ ಪ್ರಮುಖ ಕ್ಷೇತ್ರವಾಗಿದೆ. 2025-26ನೇ ಸಾಲಿನಲ್ಲಿ ದೇಶದ ಆಹಾರ ಉತ್ಪಾದನೆ 355 ದಶಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು, ಕರ್ನಾಟಕ ರಾಜ್ಯದಲ್ಲಿಯೂ ಆಹಾರ ಉತ್ಪಾದನೆ 155-160 ದಶಲಕ್ಷ ಟನ್ ಮಟ್ಟದಲ್ಲಿ ಸಾಧನೆಯಾಗಿದೆ ಎಂದು ಸಚಿವರು ತಿಳಿಸಿದರು..

ರಾಜ್ಯ ಸರ್ಕಾರದ ಸೂಕ್ತ ಯೋಜನೆಗಳು, ಕೃಷಿ ವಿಜ್ಞಾನಿಗಳ ಸಂಶೋಧನೆಗಳು ಮತ್ತು ರೈತರ ಪರಿಶ್ರಮದ ಪರಿಣಾಮವಾಗಿ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ತೋಟಗಾರಿಕೆ ಉತ್ಪಾದನೆ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಂಸ್ಕರಣೆ, ಪ್ಯಾಕೇಜಿಂಗ್, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕವನ್ನು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ.

2026-27ನೇ ಸಾಲಿನ ಬಜೆಟ್‌ನಲ್ಲಿ “ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ”ಯಡಿ ಮುಂದಿನ ಮೂರು ವರ್ಷಗಳಿಗೆ 100 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಈ ಯೋಜನೆ ಗ್ರಾಮೀಣ ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ ಎಂದು ಚಲುವರಾಯಸ್ವಾಮಿಯವರು ಹೇಳಿದರು..

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಸುರೇಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು..

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *