ರಾಜಸ್ಥಾನ: ರಾಜಸ್ಥಾನದ ಝಲಾವರ್ ಜಿಲ್ಲೆಯ ಪಿಪ್ಲೋಡಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಹಲವು ಮಕ್ಕಳು ಅವಶೇಷಗಳಡಿ ಸಿಲುಕಿದ್ದಾರೆ.

ಸರ್ಕಾರಿ ಶಾಲಾ ಕಟ್ಟಡದ ಮೇಲ್ಛಾವಣಿ ಹಠಾತ್ತನೆ ಕುಸಿದು ಬಿದ್ದಿದ್ದು, ಶಾಲಾ ಆವರಣದಲ್ಲಿ ಅವ್ಯವಸ್ಥೆ ಉಂಟಾಗಿದೆ. ಪ್ರಾರ್ಥನಾ ಸಭೆಯ ಸಮಯದಲ್ಲಿ ಸಂಭವಿಸಿದ ಈ ಘಟನೆಯಲ್ಲಿ 60 ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಸಿಬಿ ಸಹಾಯದಿಂದ ಅವಶೇಷಗಳನ್ನು ತೆಗೆದುಹಾಕುವ ಕಾರ್ಯ ನಡೆಯುತ್ತಿದೆ, ಗಾಯಗೊಂಡ ಮಕ್ಕಳನ್ನು ಮನೋಹರ್ಥಾನ ಸಿಎಚ್ಸಿಗೆ ಕರೆತರಲಾಗುತ್ತಿದೆ