ಬಾಕಿ ವಿದ್ಯುತ್ ಬಿಲ್ ಪಾವತಿಸಿ, ಕೆಐಎಡಿಬಿ – ಬೆಸ್ಕಾಂ ಕ್ರಮ.
ತುಮಕೂರು: ಪಂಪ್ ಹೌಸ್ನ ವಿದ್ಯುತ್ ಬಿಲ್ ಪಾವತಿಸದ ಪರಿಣಾಮ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರಿನ ಸಂಪರ್ಕವನ್ನು ಕೆಐಎಡಿಬಿ ಅಧಿಕಾರಿಗಳು ಕಡಿತಗೊಳಿಸಿದ್ದರು. ಹೀಗಾಗಿ ಸಿದ್ಧಗಂಗಾ ಮಠಕ್ಕೆ ನೀರಿನ ಸಮಸ್ಯೆ ಆಗುವ ಆತಂಕ ಎದುರಾಗಿತ್ತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆ, ಟೀಕೆ ನಡೆದಿತ್ತು. ಟಿವಿ9 ವರದಿ ಕೂಡ ಮಾಡಿತ್ತು. ಇದೀಗ ವರದಿ ಬೆನ್ನಲ್ಲೇ ಬಾಕಿ ಉಳಿದಿದ್ದ ಸುಮಾರು 1.96 ಕೋಟಿ ರೂ ಹಣವನ್ನು ಬೆಸ್ಕಾಂಗೆ ಕೆಐಎಡಿಬಿ ಪಾವತಿಸಿದೆ. ಆ ಮೂಲಕ ಸಿದ್ದಗಂಗಾ ಮಠಕ್ಕೆ ಎದುರಾಗಿದ್ದ ನೀರಿನ ಆತಂಕ ಇದೀಗ ದೂರವಾಗಿದೆ.
ಕಳೆದ ವರ್ಷ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸಿದ್ದಗಂಗಾ ಮಠಕ್ಕೆ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಅದರ ಪರಿಣಾಮ ಈ ವರ್ಷ ಮಠಕ್ಕೆ ನೀರಿನ ಅಭಾವ ಎದುರಾಗಿದೆ. ಹೊನ್ನೆನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸಿ, ದೇವರಾಯಪಟ್ಟಣ ಕೆರೆಯಿಂದ ಮಠಕ್ಕೆ ನೀರು ಪಂಪ್ ಮಾಡಲಾಗುತ್ತದೆ.
ಕಳೆದ ವರ್ಷ ಕೆಐಎಡಿಬಿ ಅಧಿಕಾರಿಗಳು ಹೊನ್ನೆನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ಪಂಪ್ ಮಾಡಿದ 70 ಲಕ್ಷ ರೂ ವಿದ್ಯುತ್ ಬಿಲ್ ಪಾವತಿಸುವಂತೆ ಮಠಕ್ಕೆ ನೋಟಿಸ್ ಕೊಟ್ಟಿತ್ತು. ಅಸಲಿಗೆ ಶ್ರೀಮಠ ಒಂದು ಹನಿ ನೀರನ್ನೂ ಉಪಯೋಗಿಸಿರಲಿಲ್ಲ. ಅಧಿಕಾರಿಗಳ ಈ ಎಡವಟ್ಟು ಗಮನಿಸಿದ ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಹಣವನ್ನು ನಾವೇ ಭರಿಸುತ್ತೇವೆ ಎಂದಿದ್ದರು. ಆದರೆ ಸಚಿವರು ಭರವಸೆ ಕೊಟ್ಟು ಒಂದು ವರ್ಷ ಆದರೂ ಕೆಐಎಡಿಬಿ ವಿದ್ಯುತ್ ಬಿಲ್ ಪಾವತಿ ಮಾಡಿರಲಿಲ್ಲ. ಬೆಸ್ಕಾಂ ಅಧಿಕಾರಿಗಳು ಹೊನ್ನೆನಹಳ್ಳಿಯಲ್ಲಿ ಇರುವ ನೀರು ಪಂಪ್ ಮಾಡುವ ಘಟಕದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಪ್ರತಿದಿನ ಲಕ್ಷಾಂತರ ಭಕ್ತರು ಬರುತ್ತಾರೆ. ಬಂದ ಭಕ್ತಾಧಿಗಳಿಗೆ ಊಟ, ವಸತಿ, ಸ್ನಾನಾದಿಗಳಿಗೆ ನೀರಿನ ಕೊರತೆ ಉಂಟಾಗಬಹುದು. ಅಲ್ಲದೆ ನಿತ್ಯ 10 ಸಾವಿರ ವಿದ್ಯಾರ್ಥಿಗಳ ಉಪಯೋಗಕ್ಕೆ ನೀರಿನ ಅವಶ್ಯಕತೆ ಇದೆ. ಹಾಗಾಗಿ ಸಿದ್ದಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ಎದುರಾಗಲಿದೆ ಎನ್ನಲಾಗುತ್ತಿತ್ತು.
ದೇವರಾಯಪಟ್ಟಣ ಕೆರೆಗೆ ಆರು ತಿಂಗಳಿಂದ ನೀರು ಬಾರದ ಹಿನ್ನೆಲೆ ಮಠ ಸೇರಿದಂತೆ ಸ್ಥಳೀಯ ರೈತರಿಗೂ ನೀರು ಸಿಗದ ಆತಂಕ ಶುರುವಾಗಿತ್ತು. ಹೀಗಾಗಿ ಸರ್ಕಾರ ಇದರ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಿದ್ದರು. ಟಿವಿ9 ಕೂಡ ಈ ಕುರಿತು ವರದಿ ಮಾಡಿತ್ತು. ವರದಿ ಬಳಿಕ ಬಾಕಿ ಉಳಿದಿದ್ದ ಸುಮಾರು 1.96 ಕೋಟಿ ರೂ ಹಣವನ್ನು ಬೆಸ್ಕಾಂಗೆ ಕೆಐಎಡಿಬಿ ಪಾವತಿಸಿದೆ. ಇದರಿಂದ ಮಠಕ್ಕೆ ನೀರಿನ ಕೊರತೆಯ ಆತಂಕ ದೂರುವಾಗಿದೆ.
For More Updates Join our WhatsApp Group :



