ಉತ್ತರ ಕರ್ನಾಟಕದಲ್ಲಿ 40°C ದಾಟಿದ ಉಷ್ಣಾಂಶ – ಜನಜೀವನ ಅಸ್ತವ್ಯಸ್ತ
ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ಬಿಸಿಲಿನ ತಾಪಮಾನ ಏರಿಕೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ಮೀರಿದ ಉಷ್ಣಾಂಶದಿಂದ ಪ್ರಾಣಿ, ಪಕ್ಷಿ ಹಾಗೂ ಮನುಷ್ಯರ ಬದುಕು ದುಸ್ತರವಾಗಿದೆ.
ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನೀರು ಮತ್ತು ಮೇವು ಕೊರತೆಯಿಂದ ಪಶುಗಳು ನರಳುತ್ತಿವೆ. ಕೆರೆಗಳು ಬತ್ತಿ ಹೋಗಿರುವುದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.ಗದಗ ಸೇರಿದಂತೆ ಹಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಜನರು ದಿನನಿತ್ಯದ ಬದುಕಿಗಾಗಿ ಹೋರಾಡುತ್ತಿದ್ದಾರೆ.ತೀವ್ರ ಬಿಸಿಲಿನ ಪರಿಣಾಮವಾಗಿ ರಾಯಚೂರಿನಲ್ಲಿ ಇಬ್ಬರು ಸಾವನ್ನಪ್ಪಿದ್ದು, ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
11 ರಿಂದ 4 ಗಂಟೆಯವರೆಗೆ ಹೊರಗೆ ಹೋಗಬಾರದು, ಹೆಚ್ಚಿನ ನೀರು ಸೇವಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಬೀದರ್ನಲ್ಲಿ ಏರ್ ಕೂಲರ್ ಹಾಗೂ ಬಾಗಲಕೋಟೆಯಲ್ಲಿ ಮಣ್ಣಿನ ಮಡಿಕೆಗಳಿಗೆ ಬೇಡಿಕೆ ಹೆಚ್ಚಾಗಿದೆ.
For More Updates Join our WhatsApp Group :




