ಮತ್ತೆ ಶುರುವಾಯ್ತು ಟೋಯಿಂಗ್ ಬಿಸಿ; ಒಂದೇ ತಿಂಗಳಲ್ಲಿ 600ಕ್ಕೂ ಹೆಚ್ಚು ವಾಹನಗಳು ಸೀಜ್..

ಮತ್ತೆ ಶುರುವಾಯ್ತು ಟೋಯಿಂಗ್ ಬಿಸಿ; ಒಂದೇ ತಿಂಗಳಲ್ಲಿ 600ಕ್ಕೂ ಹೆಚ್ಚು ವಾಹನಗಳು ಸೀಜ್..

ಅಡ್ಡಾದಿಡ್ಡಿ ಪಾರ್ಕಿಂಗ್‌ಗೆ ಬ್ರೇಕ್: 4 ವರ್ಷಗಳ ಬಳಿಕ ಟೋಯಿಂಗ್ ಕಾರ್ಯಾಚರಣೆ ಆರಂಭ..

ಬೆಂಗಳೂರು: ಸಿಲಿಕಾನ್ ಸಿಟಿ ಸವಾರರಿಗೆ ಈಗ ಟೋಯಿಂಗ್ ಭೀತಿ ಶುರುವಾಗಿದೆ. ಸುಮಾರು 4 ವರ್ಷಗಳ ಸುದೀರ್ಘ ವಿರಾಮದ ನಂತರ ಸಂಚಾರಿ ಪೊಲೀಸರು ಮತ್ತೆ ಅಖಾಡಕ್ಕಿಳಿದಿದ್ದು, ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುವವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.

ಕಾರ್ಯಾಚರಣೆ ಪುನಾರಂಭಗೊಂಡ ಕೇವಲ 30 ದಿನಗಳಲ್ಲಿ ಬರೋಬ್ಬರಿ 600ಕ್ಕೂ ಹೆಚ್ಚು ವಾಹನಗಳನ್ನು ಎತ್ತಂಗಡಿ ಮಾಡಲಾಗಿದೆ ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಚಾರ ಪೊಲೀಸರು ಈ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *