ರೂಪೇಶ್ ಶೆಟ್ಟಿ ನಟನೆಯ ಕನ್ನಡ-ತುಳು ಭಾಷೆಯ ‘ಜೈ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ನವೆಂಬರ್ 7ರಂದು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಟ್ರೇಲರ್ ಬಿಡುಗಡೆ ಮಾಡಲು ಬೆಂಗಳೂರಿಗೆ ಆಗಮಿಸಲಿದ್ದಾರೆ. ‘ಜೈ’ ಸಿನಿಮಾದ ಟೀಸರ್ ಈಗಾಗಲೇ ಗಮನ ಸೆಳೆದಿದೆ. ವಿದೇಶದಲ್ಲಿ ನಡೆದ ಪ್ರೀಮಿಯರ್ ಶೋನಲ್ಲಿ ಜನಮೆಚ್ಚುಗೆ ಸಿಕ್ಕಿದೆ.
ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಅವರು ಕನ್ನಡ ಮತ್ತು ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಅಭಿನಯಿಸಿರುವ ‘ಜೈ’ ಸಿನಿಮಾ ಈಗಾಗಲೇ ಕೆಲವು ಕಡೆಗಳಲ್ಲಿ ಪ್ರೀಮಿಯರ್ ಪ್ರದರ್ಶನ ಕಂಡು ಜನಮೆಚ್ಚುಗೆ ಪಡೆದಿದೆ. ನವೆಂಬರ್ 14ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಈಗಾಗಲೇ ಟೀಸರ್ ಗಮನ ಸೆಳೆದಿದೆ. ಈಗ ‘ಜೈ’ ಸಿನಿಮಾದ ಟ್ರೇಲರ್ ನೋಡುವ ಸಮಯ ಹತ್ತಿರ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಆಗಲಿದೆ. ಈ ಕಾರ್ಯಕ್ರಮಕ್ಕೆ ಬಾಲಿವುಡ್ ಸೂಪರ್ ಸ್ಟಾರ್ ಸುನೀಲ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.
ಈ ಬಗ್ಗೆ ರೂಪೇಶ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಹೌದು, ಬಾಲಿವುಡ್ನ ಅಣ್ಣ ನಮ್ಮ ಬೆಂಗಳೂರಿಗೆ ಬರುತ್ತಿದ್ದಾರೆ. ಇಂಡಿಯನ್ ಸೂಪರ್ ಸ್ಟಾರ್ ಸುನೀಲ್ ಶೆಟ್ಟಿ ಅವರು ಜೈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ನವೆಂಬರ್ 7ರಂದು ಬೆಂಗಳೂರು ಮಂತ್ರಿ ಮಾಲ್ಗೆ ಬರಲಿದ್ದಾರೆ’ ಎಂದು ರೂಪೇಶ್ ಶೆಟ್ಟಿ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ರೂಪೇಶ್ ಶೆಟ್ಟಿ ಅವರೇ ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರು ಜೊತೆಯಲ್ಲಿ ಅದ್ವಿತಿ ಶೆಟ್ಟಿ, ಅರವಿಂದ್ ಬೋಳಾರ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ. ಪಡೀಲ್, ದೇವದಾಸ್ ಕಾಪಿಕಾಡ್ ಮುಂತಾದವರು ನಟಿಸಿದ್ದಾರೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಕಾರಣದಿಂದ ‘ಜೈ’ ಸಿನಿಮಾ ಮೇಲೆ ನಿರೀಕ್ಷೆ ಜಾಸ್ತಿ ಇದೆ.
For More Updates Join our WhatsApp Group :
