ನಿರಾಶ್ರಿತರಿಗೆ ಆಶ್ರಯ ಕಲ್ಪಿಸಿ ಜನಮನ ಗೆದ್ದ ಪೊಲೀಸ್ ಇಲಾಖೆ
ಸಿರಾ : ಪೊಲೀಸ್ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿರುವ ಘಟನೆ ಸಿರಾ ನಗರದಲ್ಲಿ ನಡೆದಿದೆ. ಸಿರಾ ನಗರ ಬಸ್ ನಿಲ್ದಾಣದ ಆವರಣದಲ್ಲಿ ವಾಸವಿಲ್ಲದೆ ಆಶ್ರಯವಿಲ್ಲದೆ ಇದ್ದ ಸುಮಾರು 10 ಜನ ನಿರಾಶ್ರಿತರನ್ನು ಗುರುತಿಸಿದ ಸಿರಾ ಪೊಲೀಸರು, ತಕ್ಷಣವೇ ಕ್ರಮ ಕೈಗೊಂಡು ಅವರನ್ನು ತುಮಕೂರು ಜಿಲ್ಲೆಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಿರಾಶ್ರಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅವರ ಸುರಕ್ಷತೆ ಹಾಗೂ ಆರೈಕೆಯ ಬಗ್ಗೆ ಪೊಲೀಸ್ ಇಲಾಖೆ ವಿಶೇಷ ಗಮನ ಹರಿಸಿದೆ. ಅದೇ ಭಾಗವಾಗಿ, ಸಿರಾ ನಗರ ಬಸ್ ಸ್ಟಾಂಡ್ನಲ್ಲಿ ದಿನದ ಬಹುಭಾಗವನ್ನು ಕಳೆಯುತ್ತಿದ್ದ ನಿರಾಶ್ರಿತರು ಆಹಾರ, ವಾಸಸ್ಥಾನ ಹಾಗೂ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದುದನ್ನು ಗಮನಿಸಿದ ಪೊಲೀಸ್ ಸಿಬ್ಬಂದಿಗಳು, ಮಾನವೀಯ ದೃಷ್ಟಿಯಿಂದ ಈ ಕಾರ್ಯಾಚರಣೆ ಕೈಗೊಂಡರು.
ನಿರಾಶ್ರಿತರನ್ನು ತುಮಕೂರು ಪರಿಹಾರ ಕೇಂದ್ರಕ್ಕೆ ಕಳುಹಿಸುವ ಮೊದಲು ಅವರ ಆರೋಗ್ಯ ಸ್ಥಿತಿ ಹಾಗೂ ಮೂಲಭೂತ ಅಗತ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು. ನಂತರ ಸಂಬಂಧಪಟ್ಟ ಅಧಿಕಾರಿಗಳ ಸಹಕಾರದೊಂದಿಗೆ ಸೂಕ್ತ ವಾಹನ ವ್ಯವಸ್ಥೆ ಮಾಡಿ ಅವರನ್ನು ಪರಿಹಾರ ಕೇಂದ್ರಕ್ಕೆ ರವಾನಿಸಲಾಯಿತು.
ಪೊಲೀಸ್ ಇಲಾಖೆಯ ಈ ಕ್ರಮ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಕಾನೂನು ಪಾಲನೆಯ ಜೊತೆಗೆ ಸಮಾಜಮುಖಿ ಸೇವೆಯಲ್ಲೂ ಪೊಲೀಸರು ಮುಂಚೂಣಿಯಲ್ಲಿದ್ದಾರೆ ಎಂಬುದಕ್ಕೆ ಉದಾಹರಣೆಯಾಗಿದೆ. ಮುಂದಿನ ದಿನಗಳಲ್ಲೂ ಇಂತಹ ಮಾನವೀಯ ಕಾರ್ಯಗಳನ್ನು ಮುಂದುವರಿಸುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.
For More Updates Join our WhatsApp Group :




