ಮಹಾಬಲೇಶ್ವರ ದೇವಾಲಯದಲ್ಲಿ ಕಳ್ಳತನ.

ಮಹಾಬಲೇಶ್ವರ ದೇವಾಲಯದಲ್ಲಿ ಕಳ್ಳತನ.

ಹುಂಡಿ ಹಣ, ಬೆಳ್ಳಿ ವಿಗ್ರಹ, ಕಂಚಿನ ಆಭರಣ ದೋಚಿಕೆ.

ಮೈಸೂರು : ಜಿಲ್ಲೆಯಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಇದೀಗ ನಿನ್ನೆ (ಜ.14) ರಾತ್ರಿ ಮಹಾಬಲೇಶ್ವರ ದೇವಸ್ಥಾನದಲ್ಲಿ ಕಳ್ಳತನ ಆಗಿದೆ. ಸರಗೂರು ತಾಲೂಕಿನ ತೊರವಳ್ಳಿ ಗ್ರಾಮದಲ್ಲಿರುವ ಈ ದೇವಾಲಯದಲ್ಲಿದ್ದ ಹುಂಡಿ ಹಣ, ಬೆಳ್ಳಿ ವಿಗ್ರಹಗಳು, ಕಂಚಿನ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಬೆಳಗ್ಗೆ ಪೂಜೆ ಮಾಡಲು ದೇವಸ್ಥಾನಕ್ಕೆ ಬಂದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಇತ್ತೀಚಿಗೆ ಮೈಸೂರು ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗಿದೆ. ಕಳ್ಳರು, ದರೋಡೆಕೋರರ ಕಾಟಕ್ಕೆ ಮೈಸೂರಿನ ಜನ ಬೆಚ್ಚಿ ಬಿದ್ದಿದ್ದರೆ. ಇದೀಗ ಈ ಪ್ರಕಣಕ್ಕೆ ಸಂಬಂಧಿಸಿದಂತೆ ಸರಗೂರು ಪೊಲೀಸ್ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *