ತಿರುವನಂತಪುರಂ: ಅತ್ಯಾಚಾರ ಹಾಗೂ ಕೊಲೆಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಗೋವಿಂದಚಾಮಿ, ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. 2011ರಲ್ಲಿ ಈತ ಓರ್ವ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ.

ಬೆಳಗಿನ ಜಾವ ಆತನ ಸೆಲ್ಗೆ ನಿಯಮಿತ ತಪಾಸಣೆಗೆಂದು ಬಂದಾಗ ಆತ ಇಲ್ಲದಿರುವುದು ತಿಳಿಸುಬಂದಿದೆ.ಜೈಲು ಅಧಿಕಾರಿಗಳು ತಕ್ಷಣ ಜೈಲು ಆವರಣದಲ್ಲಿ ಮತ್ತು ಸುತ್ತಮುತ್ತ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಕೈದಿ ಎಲ್ಲಿಯೂ ಪತ್ತೆಯಾಗಲಿಲ್ಲ. ಬೆಳಗ್ಗೆ 7 ಗಂಟೆಗೆ ಪರಾರಿಯಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕಣ್ಣೂರು ಪಟ್ಟಣ ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಹುಡುಕಾಟ ನಡೆಯುತ್ತಿದೆ.
ಫೆಬ್ರವರಿ 1, 2011 ರಂದು ಎರ್ನಾಕುಲಂನಿಂದ ಶೋರನೂರಿಗೆ ಹೋಗುವ ಪ್ಯಾಸೆಂಜರ್ ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಶೋರ್ನೂರ್ ಬಳಿಯ ಮಂಜಕ್ಕಾಡ್ನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ. . ಅವನು ಹೇಗೆ ತಪ್ಪಿಸಿಕೊಂಡಿದ್ದಾನೆ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಸಂತ್ರಸ್ತೆಯ ತಾಯಿ , ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿ, ಜೈಲಿನಲ್ಲಿ ಇಷ್ಟು ದೊಡ್ಡ ಪ್ರಮಾದ ಹೇಗೆ ನಡೆಯುತ್ತೆ ಎಂದು ಪ್ರಶ್ನಿಸಿದ್ದಾರೆ.ಕಣ್ಣೂರು ಜೈಲು ತುಂಬಾ ದೊಡ್ಡದಾಗಿದೆ. ಅಲ್ಲಿಂದ ಆತ ಹೇಗೆ ಹಾರಿ ತಪ್ಪಿಸಿಕೊಳ್ಳಲು ಸಾಧ್ಯ? ಬೆಂಬಲವಿಲ್ಲದೆ ಅವನು ಅದನ್ನು ಮಾಡಲು ಸಾಧ್ಯವಿಲ್ಲ. ಅದು ಅಸಾಧ್ಯ. ಒಳಗೆ ಯಾರೋ ಅವನಿಗೆ ಸಹಾಯ ಮಾಡುತ್ತಿದ್ದಾರೆ. ಆತನನ್ನು ಹುಡುಕಲೇಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಅವರು ಜೈಲು ವ್ಯವಸ್ಥೆಯಲ್ಲಿ ಗಂಭೀರ ಲೋಪಗಳಿವೆ ಎಂದು ಆರೋಪಿಸಿದರು. ಅಪರಾಧಿ ಮಧ್ಯರಾತ್ರಿ 1 ಗಂಟೆಗೆ ಪರಾರಿಯಾಗಿದ್ದಾನೆ. ಜೈಲು ಅಧಿಕಾರಿಗಳಿಗೆ ಬೆಳಗ್ಗೆ 5 ಗಂಟೆಗೆ ಈ ವಿಷಯ ತಿಳಿಯಿತು. ಬೆಳಗ್ಗೆ 7 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಗೋಡೆಯ ಮೇಲೆ ವಿದ್ಯುತ್ ಬೇಲಿ ಹಾಕಲಾಗಿತ್ತು.
ಅವನು ಜೈಲಿನಿಂದ ಪರಾರಿಯಾಗುವಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಎಲ್ಲವೂ ನಿಗೂಢ. ಅವನು ತಪ್ಪಿಸಿಕೊಂಡಿದ್ದಾನೋ ಅಥವಾ ತಪ್ಪಿಸಿಕೊಳ್ಳಲು ಸಹಾಯ ಮಾಡಲಾಗಿತ್ತೋ? ಎಂದು ಸುರೇಂದ್ರನ್ ಕೇಳಿದ್ದಾರೆ.