ಟೀಮ್ ಇಂಡಿಯಾದಲ್ಲಿ ಹಾರ್ದಿಕ್‌ಗೆ ಮಾತ್ರ ಈ ಸಾಧನೆ.

ಟೀಮ್ ಇಂಡಿಯಾದಲ್ಲಿ ಹಾರ್ದಿಕ್‌ಗೆ ಮಾತ್ರ ಈ ಸಾಧನೆ.

ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರನೇ ಟಿ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವಿನ ನಡುವೆಯೇ ಟೀಮ್ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶೇಷ ದಾಖಲೆಯನ್ನು ಸಹ ಬರೆದಿದ್ದಾರೆ.

ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮೂರು ಓವರ್‌ಗಳನ್ನು ಎಸೆದಿದ್ದರು. ಈ ವೇಳೆ 23 ರನ್ ನೀಡುವ ಮೂಲಕ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್ ನೊಂದಿಗೆ ಪಾಂಡ್ಯ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಈ ಮೂಲಕ ಟಿ೨೦ ಇತಿಹಾಸದಲ್ಲೇ ಭಾರತದ ಪರ 100 ವಿಕೆಟ್ ಹಾಗೂ 1000 ರನ್ ಕಲೆಹಾಕಿದ ಮೊದಲ ಆಟಗಾರರ ಎಂಬ ದಾಖಲೆಯನ್ನು ಹಾರ್ದಿಕ್ ಪಾಂಡ್ಯ ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಈ ಸಾಧನೆ ಮಾಡಿದ ವಿಶ್ವದ 5ನೇ ಆಟಗಾರ ಎನಿಸಿಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯಗೂ ಮುನ್ನ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಝಿಂಬಾಬ್ವೆಯ ಸಿಕಂದರ್ ರಾಝ, ಮಲೇಷ್ಯಾದ ವೀರನ್ ದೀಪ್ ಸಿಂಗ್ ಈ ಸಾಧನೆ ಮಾಡಿದ್ದರು. ಇದೀಗ ಈ ಸಾಧಕರ ಪಟ್ಟಿಯಲ್ಲಿ ಭಾರತೀಯನಾಗಿ ಪಾಂಡ್ಯ ಕಾಣಿಸಿಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ಈವರೆಗೆ 123 ಟಿ೨೦ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 100 ವಿಕೆಟ್ ಹಾಗೂ 1939 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 100 ವಿಕೆಟ್ ಹಾಗೂ 1000+ ರನ್ ಗಳಿಸಿದ ಭಾರತದ  ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *