ರಾಜ್ಯದ 6 ಸಚಿವರ ಮಕ್ಕಳು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಫಲಿತಾಂಶ ಹೀಗಿದೆ

ಬೆಂಗಳೂರು​: ಈ ಬಾರಿಯ ಲೋಕಸಭಾ ಚುನಾವಣೆಯು ಆರು ಸಚಿವರ ಮಕ್ಕಳು ಅಭ್ಯರ್ಥಿಗಳಾಗಿ ಅಖಾಡಕ್ಕಿಳಿದಿದ್ದರಿಂದ ಕುತೂಹಲ ಮೂಡಿಸಿದೆ. ಸೋಲು-ಗೆಲುವು, ರಾಜಕೀಯ ಭವಿಷ್ಯ ಇವತ್ತಿನ ಫಲಿತಾಂಶದ ಮೂಲಕ ನಿರ್ಧಾರವಾಗಲಿದೆ.

ಚಿಕ್ಕೋಡಿ ಕ್ಷೇತ್ರ; ಜಾರಕಿಹೊಳಿ ಕುಟುಂಬದ ಕುಡಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಇದೇ ಮೊದಲ ಬಾರಿಗೆ ಲೋಕಸಭೆ ಅಖಾಡಕ್ಕೆ ಧುಮುಕಿದ್ದಾರೆ. ಈ ಚುನಾವಣೆಯನ್ನು ಜಾರಕಿಹೊಳಿ ಕುಟುಂಬ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರ ಪ್ರತಿಸ್ಪರ್ಧಿ ಅಣ್ಣಾಸಾಹೇಬ್​ ಜೊಲ್ಲೆಗೆ ಭಾರಿ ಪೈಪೋಟಿ ನೀಡುತ್ತಿದ್ದಾರೆ. ಕ್ಷೇತ್ರದ ಫಲಿತಾಂಶದಲ್ಲಿ ಹಾವು ಏಣಿ ಆಟ ಮುಂದುವರಿದಿದೆ.

ಬೆಳಗಾವಿ ಕ್ಷೇತ್ರ: ಮತ್ತೊಂದೆಡೆ ಬೆಳಗಾವಿ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ ಮೃಣಾಲ್​ ಹೆಬ್ಬಾಳ್ಕರ್​- ಕಾಂಗ್ರೆಸ್​ನಿಂದ ಅಖಾಡದಲ್ಲಿದ್ದರೆ, ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಸ್ಪರ್ಧಿಸಿದ್ದಾರೆ. ಮೃಣಾಲ್​ ವಿರುದ್ಧ ಶೆಟ್ಟರ್​ ಭಾರಿ ಮುನ್ನಡೆ ಸಾಧಿಸಿದ್ದಾರೆ.

ಚಾಮರಾಜನಗರ ಕ್ಷೇತ್ರ; ಮತ್ತೊಂದೆಡೆ ಚಾಮರಾಜನಗರ ಕ್ಷೇತ್ರವೂ ಸಹ ಜಿದ್ದಾಜಿದ್ದಿಯಿಂದ ಕೂಡಿದೆ. ಆರಂಭದಿಂದ ಈವರೆಗೆ ಸಚಿವ ಹೆಚ್​ ಸಿ ಮಹದೇವಪ್ಪ ಅವರ ಪುತ್ರ ಸುನಿಲ್​ ಬೋಸ್​ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎಸ್​ಸಿ ಮೀಸಲು ಕ್ಷೇತ್ರವಾದ ಇಲ್ಲಿ ಬಿಜೆಪಿಯ ಅಭ್ಯರ್ಥಿ ಬಾಲರಾಜ್​ ಮಧ್ಯೆ ತೀವ್ರ ಪೈಪೋಟಿ ಇದೆ.

ಬೆಂಗಳೂರು ದಕ್ಷಿಣ ಕ್ಷೇತ್ರ; ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ, ಮಾಜಿ ಶಾಸಕಿ ಸೌಮ್ಯರೆಡ್ಡಿ ಸ್ಪರ್ಧಿಸಿದ್ದು, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಸವಾಲು ಹಾಕಿದ್ದಾರೆ. ಸೂರ್ಯ ಮತ್ತೊಂದು ಭಾರಿ ಅದೃಷ್ಟ ಪರೀಕ್ಷೆಗಿಳಿದಿದ್ದು, ಫಲಿತಾಂಶದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೀದರ್​ ಕ್ಷೇತ್ರ; ಬೀದರ್​ ಲೋಕಸಭಾ ಕ್ಷೇತ್ರದಿಂದ ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವ ಸಾಗರ್​ ಖಂಡ್ರೆ ಸಚಿವ ಈಶ್ವರ್​ ಖಂಡ್ರೆ ಪುತ್ರ. ಇವರು ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ನೇರ ಪೈಪೋಟಿ ಒಡ್ಡಿದ್ದಾರೆ. ದೇಶದ ಅತಿ ಕಿರಿಯ ವಯಸ್ಸಿನ(26 ವರ್ಷ) ಅಭ್ಯರ್ಥಿ ಸಾಗರ್ ಖಂಡ್ರೆ ಆಗಿದ್ದಾರೆ. ​

ಬಾಗಲಕೋಟೆ ಕ್ಷೇತ್ರ; ಸಚಿವ ಶಿವಾನಂದ ಪಾಟೀಲ್​ ಅವರ ಪುತ್ರಿ ಸಂಯುಕ್ತಾ ಪಾಟೀಲ್​ ಅವರು ಬಾಗಲಕೋಟೆ ಕ್ಷೇತ್ರದಿಂದ ಅಖಾಡಕ್ಕಿಳಿದಿದ್ದು, ಬಿಜೆಪಿ ಹಿರಿಯ ನಾಯಕ ಪಿಸಿ ಗದ್ದಿಗೌಡರ ಅವರಿಗೆ ಪೈಪೋಟಿ ನೀಡುತ್ತಿದ್ದಾರೆ. ಆದ್ರೆ ಇದು ಸದ್ಯದ ಟ್ರೆಂಡಿಂಗ್​ನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

Leave a Reply

Your email address will not be published. Required fields are marked *