ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪದಗಳಿಂದ ಹೀಯಾಳಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟೊಂದನ್ನು ಮಾಡಿರುವ ವೃತ್ತಿಯಲ್ಲಿ ಅರ್ಚಕನಾಗಿರುವ ವ್ಯಕ್ತಿಯೊಬ್ಬನ ವಿರುದ್ಧ ಕೆಪಿಸಿಸಿ ಮೈಸೂರು ಘಟಕವು ಮೈಸೂರು ಪೊಲೀಸ್ ಕಮೀಷನರ್ ಅವರಿಗೆ ದೂರೊಂದನ್ನು ಸಲ್ಲಿಸಿದೆ.
ಆರೋಪಿಯು ಬೆಂಗಳೂರು ನಗರ ಕೆಂಗೇರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಅರ್ಚಕನಾಗಿ ಕೆಲಸ ಮಾಡುತ್ತಾರೆ, ತನ್ನ ಪೋಸ್ಟ್ನಲ್ಲಿ ಮುಖ್ಯಮಂತ್ರಿಯವರಿಗೆ ಮುಸುಂಡಿ, ತಲೆಹಿಡುಕ ಎಂಬ ಪದಗಳನ್ನು ಬಳಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಹೇಳಿದರು. ದಸರಾ ಉದ್ಘಾಟನೆಯನ್ನು ಸಿದ್ದರಾಮಯ್ಯನವರು ಬಾನು ಮುಷ್ತಾಕ್ ಅವರಿಂದ ಮಾಡಿಸುವುದು ಈ ಅರ್ಚಕನಿಗೆ ಇಷ್ಟವಿಲ್ಲ, ತನ್ನ ಅಸಮಾಧಾನವನ್ನು ಅವರು ಹೀಗೆ ಹೊರಹಾಕಿದ್ದಾರೆ ಎಂದು ಲಕ್ಷ್ಮಣ ಹೇಳಿದರು.
For More Updates Join our WhatsApp Group :
